ಮನರಂಜನೆ

ದುಬೈನಲ್ಲಿ ಬಿಡುಗಡೆ ಆಗಲಿದೆ ‘Congratulations ಬ್ರದರ್’ ಚಿತ್ರದ ಹಾಡು

ಮೂರು ತಿಂಗಳ ಹಿಂದೆ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರದ ಚಿತ್ರೀಕರಣ ಮುಗಿದು, ಇದೀಗ ಪೋಸ್ಟ್ ಪ್ರೊಡಕ್ಷನ್‍ ಕೆಲಸ ಸಹ ಪ್ರಾರಂಭವಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವು ಜೂನ್‍ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಏಪ್ರಿಲ್‍ ತಿಂಗಳಲ್ಲಿ ಚಿತ್ರದ ಮೊದಲ ಹಾಡು ದುಬೈನಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ನಡೆಸಿದೆ.

ಕಲ್ಲೂರ್ ಸಿನಿಮಾಸ್ ಮತ್ತು ಪೆನ್ ಎನ್ ಪೇಪರ್ ಸ್ಟುಡಿಯೋಸ್ ಲಾಂಛನದಲ್ಲಿ ಪ್ರಶಾಂತ್ ಕಲ್ಲೂರ್ ನಿರ್ಮಿಸಿರುವ ‘Congratulations ಬ್ರದರ್’ ಚಿತ್ರವನ್ನು ಪ್ರತಾಪ್ ಗಂಧರ್ವ ನಿರ್ದೇಶಿಸಿದರೆ, ಹರಿ ಸಂತೋಷ್ ಕಥೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ರಕ್ಷಿತ್ ನಾಗ್, ಸಂಜನಾ ದಾಸ್, ಅನುಶಾ, ಶಶಿಕುಮಾರ್‍ ಮುಂತಾದವರು ನಟಿಸಿದ್ದಾರೆ.

ಹುಡುಗರಿಗೆ ಹುಡುಗಿಯರು ಸಿಗದಿರುವ ಪರಿಸ್ಥಿತಿ ನಿರ್ಮಾಣವಾಗಿರುವ ಈ ಕಾಲದಲ್ಲಿ ಒಬ್ಬ ಹುಡುಗನಿಗೆ ಇಬ್ಬರು ಹುಡುಗಿಯರು ಸಿಕ್ಕಾಗ ಎಲ್ಲರೂ ‘Congratulations ಬ್ರದರ್’ ಎಂದು ಹೇಳುತ್ತಾರೆ. ಮುಂದೆ ಆತನ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಕಥೆಯಂತೆ. ಈ ಚಿತ್ರಕ್ಕಾಗಿ ಕಾರವಾರ, ಬೆಂಗಳೂರು ಸೇರಿದಂತೆ ಅನೇಕ ಕಡೆ 45 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

ಹಿರಿಯ ನಟ ಶಶಿಕುಮಾರ್ ಮಾತನಾಡಿ, ‘ಚಿತ್ರ ಮಾಡುವಾಗ ಪಕ್ಕಾ ಯೋಜನೆ ಹಾಕಿಕೊಳ್ಳುವುದು ಮುಖ್ಯ. ಅಂದುಕೊಂಡ ದಿನದಲ್ಲಿ ಹೆಚ್ಚು ಕಡಿಮೆ ಮುಗಿಸಿದರೆ ನಿರ್ಮಾಪಕರಿಗೂ ಅನುಕೂಲವಾಗಲಿದೆ. ನಾವೆಲ್ಲಾ ಚಿತ್ರರಂಗಕ್ಕೆ ಬಂದಾಗ ಪಕ್ಕಾ ಪ್ಲಾನಿಂಗ್ ಮಾಡಿಕೊಂಡು ಕೆಲಸ ಮಾಡುತ್ತಿದ್ದೆವು. ಅಂತಹುದೇ ವಾತಾವರಣ ಚಿತ್ರರಂಗದಲ್ಲಿ ಬರಬೇಕು. ಈ ಚಿತ್ರದಲ್ಲಿ ನಾನು ನಾಯಕನ ತಂದೆಯ ಪಾತ್ರ ಮಾಡಿದ್ದೇನೆ. ಹರಿ ಸಂತೋಷ್ ನನಗೆ ಕಥೆ ಹೇಳಿದರು. ಕಥೆ ಚೆನ್ನಾಗಿದೆ. ಚಿತ್ರ ಕೂಡ ಎಲ್ಲರಿಗೂ ಪ್ರಿಯವಾಗಲಿದೆ’ ಎಂದರು.

‘Congratulations ಬ್ರದರ್’ ಚಿತ್ರಕ್ಕೆ ಗುರು ಛಾಯಾಗ್ರಹಣ ಮತ್ತು ಸೂರಜ್‍ ಜೋಯಿಸ್‍ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಪ್ರಭುಸ್ವಾಮಿ ಬೆಟ್ಟದ ಅರೆಕಲ್ಲ ಮೇಲೆ ಎಡೆಪರು ಊಟ

'ಎಲೆ? ಯಾವೂರೆಲೆ ಕಂಡರಿ ಇಲ್ಲಿ. ಅರೆಕಲ್ಲ ಮೇಲೆನೆ ಊಟ. ಪ್ಲಾಸ್ಟಿಕ್ ಲೋಟದಲ್ಲಿರೋ ನೀರಾ ಮುಂದಿರೋ ಅರೆಕಲ್ಲ ಮೇಲೆ ಚಿಮುಕಿಸಿ ರೆಡಿ…

21 mins ago

ಬೀದಿಗೆ ಬಿದ್ದವರಿಗೆ ಚಳಿಗಾಲ ಎಷ್ಟೊಂದು ನರಕ…

ಹಾದಿಬದಿಯ ನಿರಾಶ್ರಿತರು ಆಕಾಶವನ್ನೇ ಹೊದಿಕೆಯಾಗಿಸಿಕೊಂಡು,ಭೂಮಿಯನ್ನೇ ಹಾಸಿಗೆಯನ್ನಾಗಿಸಿ ಕೊಂಡು ಸಿಕ್ಕ ಕೆಲಸ ಮಾಡುತ್ತಾ, ಸಿಕ್ಕಸಿಕ್ಕ ಹಾಗೆ ಬದುಕು ಸವೆಸುತ್ತಾ ಕಳೆಯುತ್ತಾರೆ. ಚಳಿಯಾದರೇನು,…

24 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಡಿಸೆಂಬರ್‌ 14 ಭಾನುವಾರ

38 mins ago

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

13 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

13 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

14 hours ago