ಮೂರು ತಿಂಗಳ ಹಿಂದೆ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರದ ಚಿತ್ರೀಕರಣ ಮುಗಿದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಸಹ ಪ್ರಾರಂಭವಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವು ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಏಪ್ರಿಲ್ ತಿಂಗಳಲ್ಲಿ ಚಿತ್ರದ ಮೊದಲ ಹಾಡನ್ನು ದುಬೈನಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ನಡೆಸಿದೆ.
ಕಲ್ಲೂರ್ ಸಿನಿಮಾಸ್ ಮತ್ತುಪೆನ್‌ಎನ್ ಪೇಪರ್ಸ್ ಸ್ಟುಡಿಯೋಸ್ ಲಾಂಛನದಲ್ಲಿ ಪ್ರಶಾಂತ್ ಕಲ್ಲೂರ್ ನಿರ್ಮಿಸಿರುವ ‘Congratulations ಬ್ರದರ್’ ಚಿತ್ರವನ್ನು ಪ್ರತಾಪ್ ಗಂಧರ್ವನಿರ್ದೇಶಿಸಿದರೆ, ಹರಿ ಸಂತೋಷ್ ಕಥೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ರಕ್ಷಿತ್ ನಾಗ್, ಸಂಜನಾ ದಾಸ್, ಅನುಶಾ, ಶಶಿಕುಮಾರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹುಡುಗರಿಗೆ ಹುಡುಗಿಯರು ಸಿಗದಿರುವ ಪರಿಸ್ಥಿತಿ ನಿರ್ಮಾಣವಾಗಿರುವ ಈ ಕಾಲದಲ್ಲಿ ಒಬ್ಬ ಹುಡುಗನಿಗೆ ಇಬ್ಬರು ಹುಡುಗಿಯರು ಸಿಕ್ಕಾಗ ಎಲ್ಲರೂ ‘Congratulations ಬ್ರದರ್’ ಎಂದು ಹೇಳುತ್ತಾರೆ. ಮುಂದೆ ಆತನ ಜೀವನದಲ್ಲಿ ಏನೆಲ್ಲಾ ಆಗತ್ತದೆ ಎಂಬುದು ಚಿತ್ರದ ಕಥೆಯಂತೆ. ಈ ಚಿತ್ರಕ್ಕಾಗಿ ಕಾರವಾರ, ಬೆಂಗಳೂರು ಸೇರಿದಂತೆ ಅನೇಕ ಕಡೆ ೪೫ ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.
ಹಿರಿಯ ನಟ ಶಶಿಕುಮಾರ್ ಮಾತನಾಡಿ, ‘ಚಿತ್ರ ಮಾಡುವಾಗ ಪಕ್ಕಾ ಯೋಜನೆ ಹಾಕಿಕೊಳ್ಳುವುದು ಮುಖ್ಯ. ಅಂದುಕೊಂಡಂತೆ ಮುಗಿಸಿದರೆನಿರ್ಮಾಪಕರಿಗೂ ಅನುಕೂಲವಾಗಲಿದೆ. ನಾವೆಲ್ಲಾ ಚಿತ್ರರಂಗಕ್ಕೆ ಬಂದಾಗ ಪಕ್ಕಾ ಪ್ಲಾನಿಂಗ್ ಮಾಡಿಕೊಂಡು ಕೆಲಸ ಮಾಡುತ್ತಿದ್ದೆವು. ಅಂತಹುದೇ ವಾತಾವರಣ ಚಿತ್ರರಂಗದಲ್ಲಿ ಬರಬೇಕು. ಈ ಚಿತ್ರದಲ್ಲಿ ನಾನು ನಾಯಕನ ತಂದೆಯ ಪಾತ್ರ ಮಾಡಿದ್ದೇನೆ. ಹರಿ ಸಂತೋಷ್ ನನಗೆ ಕಥೆ ಹೇಳಿದರು. ಕಥೆ ಚೆನ್ನಾಗಿದೆ. ಚಿತ್ರ ಕೂಡ ಎಲ್ಲರಿಗೂ ಪ್ರಿಯವಾಗಲಿದೆ’ ಎಂದರು. ‘Congratulations ಬ್ರದರ್’ ಚಿತ್ರಕ್ಕೆ ಗುರು ಛಾಯಾಗ್ರಹಣ ಮತ್ತು ಸೂರಜ್ ಜೋಯಿಸ್ ಸಂಗೀತ ಸಂಯೋಜನೆ ಇದೆ.
‘ನಾಯಕ ನಾನೇ…’ ಎನ್ನುತ್ತಿದ್ದಾರೆ ‘ಮೆಜೆಸ್ಟಿಕ್ ೨’ ನಾಯಕ
‘ಮೆಜೆಸ್ಟಿಕ್ ೨’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ‘ನಾಯಕ ನಾನೇ…’ ಎಂದು ಆರಂಭವಾಗುವ ಮೊದಲ ಹಾಡು ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ರಾಮು ಕಥೆ, ಚಿತ್ರ ಕಥೆ ಬರೆದು ನಿರ್ದೇಶನ ಮಾಡಿದರೆ, ಚಿತ್ರದುರ್ಗದ ಆನಂದಪ್ಪ ನಿರ್ಮಾಣ ಮಾಡಿದ್ದಾರೆ. ಭರತ್ ಕುಮಾರ್, ಸಂಹಿತಾ ವಿನ್ಯಾ ನಾಯಕ – ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ, ನಟಿ ಶ್ರುತಿ ನಾಯಕನ ತಾಯಿಯಾಗಿ ಕಾಣಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿರುವ ಅವರು, ‘ಭರತ್, ನಾಯಕನ ಜವಾಬ್ದಾರಿಯನ್ನು ತುಂಬಾ ಶ್ರದ್ಧೆಯಿಂದ ನಿಭಾಯಿಸಿದ್ದಾರೆ. ಆತನ ತಾಯಿಯಾಗಿ ನಾನು ಅಭಿನಯಿಸಿದ್ದೇನೆ. ನಿರ್ದೇಶಕ ರಾಮು ಹೃದಯಕ್ಕೆ ಹತ್ತಿರವಾಗುವ ಸಂಭಾಷಣೆಗಳನ್ನು ಬರೆದಿದ್ದಾರೆ. ಈ ಶೀರ್ಷಿಕೆಗೆ ದೊಡ್ಡ ಇತಿಹಾಸವಿದೆ. ಅದು ಈ ಸಿನಿಮಾದಿಂದ ಮತ್ತೊಮ್ಮೆ ಮರುಕಳಿಸಲಿ’ ಎಂದರು.
ನಿರ್ದೇಶಕ ರಾಮು ಮಾತನಾಡಿ, ‘೨೦-೩೦ ವರ್ಷಗಳು ತುಂಬಾ ಕಷ್ಟಪಟ್ಟಿ ದ್ದೇನೆ. ಒಬ್ಬ ನಿರ್ಮಾಪಕನಿಗೆ ಕಥೆ ಒಪ್ಪಿಸೋದು ಸುಲಭವಲ್ಲ. ನನ್ನ ಕಥೆ ಕೇಳಿ ಅವಕಾಶ ಕೊಡುವುದರ ಜೊತೆಗೆ ಕೇಳಿದ್ದೆಲ್ಲವನ್ನೂ ಒದಗಿಸಿಕೊಟ್ಟು ಸಹಕರಿಸಿದ್ದಾರೆ’ ಎಂದರು. ನಾಯಕ ಭರತ್ ಮಾತನಾಡಿ, ‘ಈಗ ಬೆಂಗಳೂರಲ್ಲಿ ಏನೇನೆಲ್ಲ ನಡೀತಿದೆ ಅದನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಈ ಹಾಡನ್ನು ಏಳು ಗಾಯಕರು ಹಾಡಿದ್ದಾರೆ. ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಇದು ಮೆಜೆಸ್ಟಿಕ್‌ನಲ್ಲೇ ಹುಟ್ಟಿ ಬೆಳೆದ ಹುಡುಗನ ಕಥೆ. ನನ್ನ ಪಾತ್ರಕ್ಕೆ ಎರಡು ಶೇಡ್ಸ್ ಇದೆ. ಮೆಜೆಸ್ಟಿಕ್ ಅಂಡರ್ ಪಾಸ್, ಬಸ್ ಸ್ಟಾಪ್ ನಲ್ಲೂ ಚಿತ್ರೀಕರಣ ಮಾಡಿದ್ದೇವೆ’ ಎಂದರು. ‘ಮೆಜೆಸ್ಟಿಕ್ ೨’ ಚಿತ್ರಕ್ಕೆ ವಿನು ಮನಸು ಸಂಗೀತ ಸಂಯೋಜನೆ, ವೀನಸ್ ಮೂರ್ತಿ ಛಾಯಾಗ್ರಹಣವಿದೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…