ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್‌ಗೆ ಷರತ್ತು ಬದ್ದ ಜಾಮೀನು ನಿಯಮವನ್ನು ಸಡಿಲಿಸಿ ಹೈಕೋರ್ಟ್ ಆದೇಶಿಸಿದೆ.
ಹೈಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಮತ್ತೊಮ್ಮೆ ರಿಲೀಫ್ ಸಿಕ್ಕಂತಾಗಿದೆ. ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗೆ ಷರತ್ತು ಬದ್ದ ಜಾಮೀನು ನೀಡಲಾಗಿತ್ತು.
ಈ ಮೊದಲು ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳುವಂತಿರಲಿಲ್ಲ ಎಂಬ ಷರತ್ತನ್ನು ಕೋರ್ಟ್ ವಿಧಿಸಿತ್ತು. ಇದರಿಂದ ದರ್ಶನ್ ಎಲ್ಲೆ ತೆರಳಬೇಕಾದರೂ ಕೋರ್ಟ್ ಅನುಮತಿ ಪಡೆದು ತೆರಳಬೇಕಿತ್ತು. ಹೀಗಾಗಿ, ಷರತ್ತು ಸಡಿಲಿಕೆ ಕೋರಿ ಹೈಕೋರ್ಟ್‌ಗೆ ದರ್ಶನ್ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೋರ್ಟ್ ಸಮ್ಮತಿ ನೀಡಿದೆ.
ದರ್ಶನ್ ಅವರ ಅರ್ಜಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಎಸ್‌ಪಿಪಿ ಪ್ರಸನ್ನಕುಮಾರ್, ಜಾಮೀನು ಪಡೆಯುವಾಗ ಅನಾರೋಗ್ಯದ ಕಾರಣ ನೀಡಿದ್ದರು. ಈಗ ದೇಶದೆಲ್ಲೆಡೆ ಸುತ್ತಾಡಲು ಬಯಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.
ಈಗ ಕೋರ್ಟ್ ದರ್ಶನ್ ಅವರ ಷರತ್ತು ಬದ್ಧ ಜಾಮೀನನ್ನು ಸಡಿಲಿಸಿದ್ದು, ಕೋರ್ಟ್ ಅನುಮತಿಯಿಲ್ಲದೇ ದೇಶಬಿಟ್ಟು ತೆರಳುವಂತಿಲ್ಲ ಎಂದು ಹೇಳಿದೆ.





