Mysore
34
scattered clouds

Social Media

ಸೋಮವಾರ, 17 ಮಾರ್ಚ್ 2025
Light
Dark

ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಕ್ರಿಕೆಟಿಗ ಡೆವಿಡ್‌ ವಾರ್ನರ್‌

ಆಸೀಸ್‌ ಕ್ರಿಕೆಟಿಗ ಡೆವಿಡ್‌ ವಾರ್ನರ್‌ ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ಈಗ ಚಿತ್ರರಂಗದಲ್ಲಿ ಮಿಂಚಲು ಸಿದ್ದವಾಗಿದ್ದಾರೆ.

ಟಾಲಿವುಡ್‌ ನಟ ನಿತಿನ್‌ ಅಭಿನಯದ ʼರಾಬಿನ್‌ಹುಡ್‌ʼ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರತೀಯ ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ.

ಚಿತ್ರದಲ್ಲಿನ ವಾರ್ನರ್‌ ಪಾತ್ರದ ಫಸ್ಟ್‌ಲುಕ್‌ ಬಿಡುಗಡೆ ಮಾಡಿರುವ ಚಿತ್ರತಂಡ, ಮೈದಾನದಲ್ಲಿ ಮಿಂಚಿದವರು ಬೆಳ್ಳಿ ತೆರೆಯ ಮೇಲೆ ಮಿಂಚುವ ಕಾಲ ಬಂದಿದೆ ಎಂದು ಬರೆದುಕೊಂಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ವಾರ್ನರ್‌, ಚಿತ್ರದಲ್ಲಿ ನಟಿಸಿರುವುದು ಖುಷಿ ಕೊಟ್ಟಿದೆ ಎಂದು ಹೇಳಿದ್ದಾರೆ.

ಇನ್ನು ʼರಾಬಿನ್‌ಹುಡ್‌ʼ ಚಿತ್ರವನ್ನು ವೆಂಕಿ ಕುಡುಮುಲ ನಿರ್ದೇಶನಾ ಮಡುತ್ತಿದ್ದು, ಮೈತ್ರಿ ಮೂವಿ ಮೇಕರ್ಸ್‌ ನಿರ್ಮಾಣ ಮಾಡುತ್ತಿದೆ. ನಾಯಕನಾಗಿ ನಿತಿನ್‌ ಕಾಣಿಸಿಕೊಂಡರೆ, ನಾಯಕಿಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಜಿ.ವಿ.ಪ್ರಕಾಶ್‌ ಕುಮಾರ್‌ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ʼರಾಬಿನ್‌ಹುಡ್‌ʼ ಚಿತ್ರ ಮಾರ್ಚ್‌ 28ರಂದು ತೆರೆಗೆ ಬರಲಿದೆ.

Tags: