ಆಸೀಸ್ ಕ್ರಿಕೆಟಿಗ ಡೆವಿಡ್ ವಾರ್ನರ್ ಕ್ರಿಕೆಟ್‌ನಿಂದ ನಿವೃತ್ತಿಯಾದ ಬಳಿಕ ಈಗ ಚಿತ್ರರಂಗದಲ್ಲಿ ಮಿಂಚಲು ಸಿದ್ದವಾಗಿದ್ದಾರೆ.
ಟಾಲಿವುಡ್ ನಟ ನಿತಿನ್ ಅಭಿನಯದ ʼರಾಬಿನ್‌ಹುಡ್ʼ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರತೀಯ ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ.
ಚಿತ್ರದಲ್ಲಿನ ವಾರ್ನರ್ ಪಾತ್ರದ ಫಸ್ಟ್‌ಲುಕ್ ಬಿಡುಗಡೆ ಮಾಡಿರುವ ಚಿತ್ರತಂಡ, ಮೈದಾನದಲ್ಲಿ ಮಿಂಚಿದವರು ಬೆಳ್ಳಿ ತೆರೆಯ ಮೇಲೆ ಮಿಂಚುವ ಕಾಲ ಬಂದಿದೆ ಎಂದು ಬರೆದುಕೊಂಡಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಾರ್ನರ್, ಚಿತ್ರದಲ್ಲಿ ನಟಿಸಿರುವುದು ಖುಷಿ ಕೊಟ್ಟಿದೆ ಎಂದು ಹೇಳಿದ್ದಾರೆ.
ಇನ್ನು ʼರಾಬಿನ್‌ಹುಡ್ʼ ಚಿತ್ರವನ್ನು ವೆಂಕಿ ಕುಡುಮುಲ ನಿರ್ದೇಶನಾ ಮಡುತ್ತಿದ್ದು, ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ನಾಯಕನಾಗಿ ನಿತಿನ್ ಕಾಣಿಸಿಕೊಂಡರೆ, ನಾಯಕಿಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಜಿ.ವಿ.ಪ್ರಕಾಶ್ ಕುಮಾರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
ʼರಾಬಿನ್‌ಹುಡ್ʼ ಚಿತ್ರ ಮಾರ್ಚ್ 28ರಂದು ತೆರೆಗೆ ಬರಲಿದೆ.
ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್ ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ…
ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ…
ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ…
ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…
ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು…
ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ…