ನಂಜನಗೂಡು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು.
ಧನ್ಯತಾ ಜೊತೆ ಡಾಲಿ ಮದುವೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದರು.
ಈ ವೇಳೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದು, ಮದುವೆಗೆ ಆಗಮಿಸುವಂತೆ ಆಮಂತ್ರಣ ಪತ್ರ ನೀಡಿದರು.
ಬಳಿಕ ಸುತ್ತೂರು ಮಠದಲ್ಲಿ ಶಿವರಾತ್ರಿ ಶಿವಯೋಗಿಗಲ 1065ನೇ ಜಯಂತಿಯ ಹಿನ್ನೆಲೆಯಲ್ಲಿ ನಂದಿ ಧ್ವಜಕ್ಕೆ ಪೂಜೆ ಜರುಗಿತು. ಈ ವೇಳೆ ನಂದಿಧ್ವಜ ಡಾಲಿ ಧನಂಜಯ್ ಅವರು ನಂದಿ ಧ್ವಜ ಹೊತ್ತು ಕುಣಿದು ಸಂಭ್ರಮಿಸಿದರು. ಡಾಲಿ ಹಾಗೂ ಧನ್ಯತಾಗೆ ನಟ ನಾಗಭೂಷಣ್ ಕೂಡ ಸಾಥ್ ನೀಡಿದರು. ಈ ವೇಳೆ ಡಾಲಿಯನ್ನು ನೋಡಿದ ಅಭಿಮಾನಿಗಳು ಧನಂಜಯ್ ಪರ ಜೈಕಾರ ಹಾಕಿ, ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
ಇನ್ನು 2025ರ ಫೆಬ್ರವರಿ 16ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಟ ಡಾಲಿ ಧನಂಜಯ್ ಮದುವೆ ಆಗಲಿದ್ದಾರೆ. ಈ ಮದುವೆಗೆ ರಾಜಕೀಯ ಗಣ್ಯರು ಹಾಗೂ ಸಿನಿಮಾ ಸ್ಟಾರ್‌ಗಳಿಗೆ ಈಗಾಗಲೇ ಆಮಂತ್ರಣ ಪತ್ರ ನೀಡಲಾಗಿದ್ದು, ಇಂದು ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ ಮದುವೆಗೆ ಆಗಮಿಸುವಂತೆ ಆಮಂತ್ರಣ ಪತ್ರ ನೀಡಿದ್ದಾರೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…