ಹಾಸನ: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಸ್ತ್ರೀರೋಗ ತಜ್ಞೆ ಧನ್ಯತಾ ಅವರು ಮನೆಯಲ್ಲಿಯೇ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ಇಂದು ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ. ಡಾಲಿ ಧನಂಜಯ್ ಅವರು ದೀಪಾವಳಿ ಹಬ್ಬದ ದಿನದಂದು ತಮ್ಮ ಬಾಳ ಸಂಗಾತಿಯನ್ನು ಪರಿಚಯಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮನೆಯಲ್ಲಿಯೇ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಡಾಲಿ ಧನಂಜಯ್ ಹಾಗೂ ಧನ್ಯತಾ ಇಬ್ಬರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು, ಇದೀಗ ಇಬ್ಬರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮುಂದಿನ ಫೆಬ್ರವರಿ.16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಇವರಿಬ್ಬರ ಮದುವೆ ನೇರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.