ಮೈಸೂರು: ಶುಭ ಮೀನ ಲಗ್ನದಲ್ಲಿ ನಟ ಡಾಲಿ ಧನಂಜಯ್ ಅವರು, ಧನ್ಯತಾಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ಅವರ ಮದುವೆ ಅದ್ಧೂರಿಯಾಗಿ ನೆರವೇರಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಡಾಲಿ ಹಾಗೂ ಧನ್ಯತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮೈಸೂರಿನ ಅರಮನೆ ಮುಂದಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ನಟ ಡಾಲಿ ಧನಂಜಯ್ ಅವರು ಧನ್ಯತಾ ಕೊರಳಿಗೆ ತಾಳಿ ಕಟ್ಟಿದ್ದಾರೆ. ಈ ಜೋಡಿ ವಧು ವರರ ದಿರಿಸಿನಲ್ಲಿ ತುಂಬಾ ಮುದ್ದಾಗಿ ಕಾಣಿಸಿದ್ದಾರೆ.
ನಿನ್ನೆ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ಮದುವೆ ಆರತಕ್ಷತೆ ಅದ್ಧೂರಿಯಾಗಿ ನಡೆದಿತ್ತು. ಇದರಲ್ಲಿ ಚಿತ್ರರಂಗದ ಗಣ್ಯರು, ಸೆಲೆಬ್ರಿಟಿಗಳು ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಿದ್ದರು. ಇಂದು ಡಾಲಿ ಹಾಗೂ ಧನ್ಯತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…