ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಪೊಲೀಸ್‌ ಕಸ್ಟಡಿ ಇಂದಿಗೆ ಅಂತ್ಯ!

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ನಟ ದರ್ಶನ್‌ ಅವರ ವಿಚಾರಣಾ ದಿನ ಇಂದಿಗೆ ಅಂತ್ಯವಾಗಲಿದೆ. ಜೂನ್‌. 11ರಂದು ರೇಣುಕಾಸ್ವಾಮಿ ಹತ್ಯೆಯ ಸಂಬಂಧ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿತ್ತು. ಇದರಲ್ಲಿ ದರ್ಶನ್‌ ಆಪ್ತರೇ ಹೆಚ್ಚಾಗಿದ್ದರು ಎನ್ನುವುದು ವಿಶೇಷ.

ಸದ್ಯ ಅನ್ನಪೂರ್ಣೇಶ್ವರಿ ಠಾಣೆಯಲ್ಲಿ ವಿಚಾರಣಾ ಕೈದಿಯಾಗಿರುವ ನಟ ದರ್ಶನ್‌ ಅವರನ್ನು ಇಂದು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಗಳಿವೆ.

ಮೈಸೂರಿನಲ್ಲಿ ದರ್ಶನ್‌ ಬಂಧನವಾಗಿತ್ತು. ಇಂದು ಅವರ ನ್ಯಾಯಾಂಗ ಬಂಧನ ಅಂತಿಮವಾಗಿದ್ದು, ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಲಿದೆ.

ಇತ್ತ ಪೊಲೀಸರು ದರ್ಶನ್‌ ಹಾಗೂ ಇತರ ಆರರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಸಲು ಎಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮತ್ತಷ್ಟು ದಿನ ತಮ್ಮ ಕಸ್ಟಡಿಗೆ ತೆಗೆದುಕೊಳ್ಳುವ ಮೂಲಕ ತನಿಖೆಯಲ್ಲಿ ಹೆಚ್ಚಿನ ಮಾಹಿತಿ ಕಲೆಹಾಕಲು ಮನವಿ ಮಾಡುತ್ತಾರೆ ಎನ್ನಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

13 mins ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

32 mins ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

4 hours ago