ಮನರಂಜನೆ

ನಿರಂತರವಾಗಿ ಸ್ಟಾರ್‌ ಚಂದ್ರು ಪರ ಮತ ಶಿಕಾರಿ ನಡೆಸುತ್ತಿರುವ ಡಿ ಬಾಸ್‌!

ಮಂಡ್ಯ: ಮಂಡ್ಯ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರವಾಗಿ ಸ್ಯಾಂಟಲ್‌ವುಡ್‌ ಡಿಬಾಸ್‌ ದರ್ಶನ್‌ ಭರ್ಜರಿ ಮತ ಶಿಕಾರಿ ನಡೆಸುತ್ತಿದ್ದಾರೆ. ತಮಗೆ ಎಡಗೈಗೆ ಪೆಟ್ಟಾಗಿದ್ದರು ಅದನ್ನೆಲ್ಲವನ್ನು ಬದಿಗೊತ್ತಿ ಅಭ್ಯರ್ಥಿ ಪರ ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ.

ಎಡಗೈ ನೋವಿನಿಂದಾಗಿ ಚಿಕ್ಕ ಸರ್ಜರಿಗೆ ಒಳಗಾಗಿರುವ ಡಿಬಾಸ್‌ ವಿರಾಮದ ಸಮಯದಲ್ಲಿ ಚುನಾವಣಾ ಪ್ರಚಾರಕ್ಕೆ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಇಂದು(ಏ.೨೨) ಮಂಡ್ಯದ ಹಲವು ಗ್ರಾಮಗಳಿಗೆ ಭೇಟಿ ನೀಡಿರುವ ನಟ ದರ್ಶನ್‌, ಕೈ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ಮಂಡ್ಯ ಕಣದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಟಾರ್‌ ಚಂದ್ರು ನಿಂತಿದ್ದಾರೆ. ತಮ್ಮೆಲ್ಲರ ಅಮೂಲ್ಯ ಮತಗಳನ್ನು ಇವರಿಗೆ ನೀಡಿ, ನಿಮ್ಮ ಸೇವೆ ಮಾಡಲು ಅನುಮತಿ ನೀಡಬೇಕೆಂದು ನಿಮ್ಮಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಮತದಾರ ಪ್ರಭುಗಳ ಬಳಿ ಮತಯಾಚಿಸಿದ್ದಾರೆ ಡಿ ಬಾಸ್‌.

ಇನ್ನು ಜಿಲ್ಲೆಯಾದ್ಯಂತ ದರ್ಶನ್‌ ಮತ ಶಿಕಾರಿಗೆ ಮುಂದಾಗಿದ್ದು, ಹೋದ ಕಡೆಯಲ್ಲಾ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲರೂ ನಟನನ್ನು ಆತ್ಮೀಯತೆಯಿಂದ ಸ್ವಾಗತಿಸುತ್ತಿದ್ದಾರೆ.

ಕಳೆದ ಬಾರಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಇದೇ ಕ್ಷೇತ್ರದಲ್ಲಿ ಮತಯಾಚಿಸಿದ್ದ ದರ್ಶನ್‌ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಮತ ಕೇಳುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಂಗ್ರೆಸ್‌ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ: ಮುಖ್ಯಮಂತ್ರಿ ಚಂದ್ರು ಹೇಳಿಕೆ ಉಲ್ಲೇಖಿಸಿ ಟ್ವೀಟ್‌ ಮಾಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…

3 mins ago

ಕೃಷಿ ಜತೆಗೆ ಬೃಹತ್ ಕೈಗಾರಿಕಾ ಬೆಳವಣಿಗೆ ಅಗತ್ಯ; ಜಯಕುಮಾರ್

ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…

21 mins ago

ಕುವೈತ್‌ ಭೇಟಿ: ಅರೇಬಿಯನ್‌ ಗಲ್ಫ್‌ ಕಪ್‌ ಉದ್ಘಾಟನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಕುವೈತ್‌/ನವದೆಹಲಿ: 26ನೇ ಅರೇಬಿಯನ್‌ ಗಲ್ಫ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್‌ ದೊರೆ ಶೇಖ್‌ ಮಿಶಾಲ್‌…

28 mins ago

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…

28 mins ago

ಬಿಜೆಪಿಗೆ ಆತಂಕ ತಂದ ಶಾ ಅಂತರಾಳದ ಮಾತು

‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…

40 mins ago

ವೈಜ್ಞಾನಿಕ ಕಸ ವಿಲೇವಾರಿಗೆ ಜಾಗದ ಸಮಸ್ಯೆ

ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…

51 mins ago