ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ನಟ ಚಿಕ್ಕಣ್ಣ ಸೇರಿದಂತೆ ಇತರೆ ಸೆಲೆಬ್ರೆಟಿಸ್‌ಗೂ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಟ ದರ್ಶನ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಶೆಡ್, ಸ್ಟೋನಿ ಬ್ರೂಕ್ ಹಾಗೂ ಕಾಮಾಕ್ಷಿ ಪಾಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.
ಕೊಲೆ ನಡೆದ ಮರುದಿನ ದರ್ಶನ್ ಅವರು ಮೈಸೂಗೆ ವಾಪಸಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಇತ್ತ ಶೂಟಿಂಗ್ ಜತೆ ಪ್ರಕರಣದಲ್ಲಿ ಉಳಿದವರು ಶರಣಾಗಲು ಹಿಂದೇಟು ಹಾಕಿದ ವೇಳೆ ಅವರ ಮನವೊಲಿಸಲು ಮೈಸೂರಿಗೆ ಕರೆಸಿರುವುದಾಗಿ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ಈ ಹಿನ್ನೆಲೆ ನಟ ದರ್ಶನ್, ಪವನ್, ನಾಗರಾಜ್ ನಂದೀಶ್ ಅವರನ್ನು ಮೈಸೂರಿಗೆ ಕರೆತಂದು ಸ್ಥಳ ಮಹಜರು ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
ದರ್ಶನ್ ಉಳಿದುಕೊಂಡಿದ್ದ ಖಾಸಗಿ ಹೋಟೆಲ್ ಸೇರಿದಂತೆ ಅವರು ಫಾರ್ಮ್ ಹೌಸ್ ಇತರೆ ಸ್ಥಳಗಳಲ್ಲಿ ಮಹಜರು ನಡೆಸುವ ಸಾಧ್ಯತೆಯಿದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…