ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟೀಸ್ ಎನ್ನುತ್ತಾರೆ. ಈಗ ಜೈಲಿನಲ್ಲಿ ಇದ್ದರೂ ಕೂಡ ದರ್ಶನ್ ತಮ್ಮ ಫ್ಯಾನ್ಸ್ ಬಗ್ಗೆ ವಿಚಾರಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಈಗ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಅವರು, ಈಗ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ. ದರ್ಶನ್ ಜೈಲು ಸೇರುತ್ತಿದ್ದಂತೆ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಕೆಲವರು ಅತಿರೇಕದ ವರ್ತನೆಗಳನ್ನು ತೋರಿಸಿದ್ದು ಕೂಡ ಉಂಟು. ಈಗ ದರ್ಶನ್ ಅವರು ಜೈಲಿನಿಂದಲೇ ಅಭಿಮಾನಿಗಳ ಬಗ್ಗೆ ವಿಚಾರಿಸಿದ್ದಾರೆ. ಈ ಬಗ್ಗೆ ವಕೀಲ ನಾರಾಯಣಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ.
ಇಂದು ಪರಪ್ಪನ ಅಗ್ರಹಾರದಲ್ಲಿ ವಕೀಲ ನಾರಾಯಣಸ್ವಾಮಿ ಅವರು ದರ್ಶನ್ ಹಾಗೂ ಪವಿತ್ರಾಗೌಡ ಅವರನ್ನು ಭೇಟಿ ಆಗಿದ್ದಾರೆ. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಾರಾಯಣಸ್ವಾಮಿ ಅವರು, ಜಾಮೀನು ಪ್ರಕ್ರಿಯೆಗಳ ಬಗ್ಗೆ ಮಾತುಕತೆ ನಡೆಸಿದ್ದೇನೆ. ಮುಂದಿನ ಕಾನೂನು ಹೋರಾಟದ ಸಾಧ್ಯತೆಗಳ ಬಗ್ಗೆಯೂ ಚರ್ಚೆ ಮಾಡಿದ್ದೇನೆ ಎಂದರು.
ಈ ಮಾತುಕತೆ ಸಲುವಾಗಿ ವಕೀಲರು ದರ್ಶನ್ ಅವರನ್ನು ಭೇಟಿಯಾದಾಗ ಅಭಿಮಾನಿಗಳ ವಿಷಯ ಕೂಡ ಪ್ರಸ್ತಾಪ ಆಗಿದೆ. ಜೈಲಿನಲ್ಲಿ ಇರುವ ದರ್ಶನ್ ಅವರು ಅಭಿಮಾನಿಗಳ ಬಗ್ಗೆ ವಿಚಾರಿಸುವುದನ್ನು ಮರೆತಿಲ್ಲ. ಅಭಿಮಾನಿಗಳು ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ದರ್ಶನ್ ಮನವಿ ಮಾಡಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…