darshan (2)
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‍ಗೆ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ. ಇತ್ತೀಚೆಗಷ್ಟೇ, ಸುಪ್ರೀಂಕೋರ್ಟ್, ದರ್ಶನ್ ಜಾಮೀನನ್ನು ರದ್ದುಪಡಿಸಿದೆ.
ಈ ಮಧ್ಯೆ, ದರ್ಶನ್ ತಮ್ಮ ಸಹೋದರ ದಿನಕರ್ ಮೂಲಕ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳಿಸಿದ್ದಾರೆ. ಆ ಸಂದೇಶವನ್ನು ದಿನಕರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಇದರಲ್ಲಿ ದರ್ಶನ್, ತಮ್ಮ ಮುಂಬರುವ ಚಿತ್ರ ‘ದಿ ಡೆವಿಲ್’ಗೆ ಅಭಿಮಾನಿಗಳು ಸಂಪೂರ್ಣವಾಗಿ ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.
‘ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೇ ಇದ್ದರೂ, ಹೇಗೇ ಇದ್ದರೂ ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರೂ, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ.
ಹಾಗಾಗಿ, ನನ್ನ ‘ದಿ ಡೆವಿಲ್’ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುದು ನನ್ನ ಆಶಯ. ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಹಾಗೂ ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿ ನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.
ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ ಮುಗಿದಿದ್ದು, ದರ್ಶನ್ ತಮ್ಮ ಭಾಗದ ಕೆಲಸಗಳನ್ನು ಮುಗಿಸಿಕೊಟ್ಟಿದ್ದಾರೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಚಿತ್ರವು ಅಕ್ಟೋಬರ್ ಕೊನೆಯಲ್ಲಿ ಬಿಡುಡೆಯಾಗುವ ಸಾಧ್ಯತೆ ಇದೆ.
‘ದಿ ಡೆವಿಲ್’ ಚಿತ್ರದಲ್ಲಿ ದರ್ಶನ್, ರಚನಾ ರೈ, ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ್ದಾರೆ.
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್‌ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…