ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಳೆದ ಕೆಲ ದಿನಗಳಿಂದ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ಸದ್ಯ ವೈದ್ಯರ ಸಲಹೆ ಮೇರೆಗೆ ಅವರನ್ನು ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್ ಅವರನ್ನು ಆರ್ಥೊ ಹಾಗೂ ನ್ಯೂರೊ ವೈದ್ಯರು ತಪಾಸಣೆ ನಡೆಸಿದ್ದರು. ತಪಾಸಣೆಯ ನಂತರ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್ ಮಾಡಬೇಕಾಗಿರುವ ಕಾರಣ ದರ್ಶನ್ ಅವರನ್ನು ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆಯೊಂದಿಗೆ ದರ್ಶನ್ ಅವರನ್ನು ಆಸ್ಪತ್ರೆಗೆ ಕರೆ ತರಲಾಗಿದ್ದು, ಆಸ್ಪತ್ರೆ ಬಳಿ ಅಭಿಮಾನಿಗಳು ಜಮಾಯಿಸಿ ತಮ್ಮ ನೆಚ್ಚಿನ ನಟನ ಪರ ಜೈಕಾರ ಹಾಕಿದ್ದಾರೆ.