ಬೆಂಗಳೂರು: ತಮ್ಮ 48ನೇ ಹುಟ್ಟು ಹಬ್ಬದ ಪ್ರಯುಕ್ತ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ನೆಚ್ಚಿನ ಅಭಿಮಾನಿಗಳಿಗೆ ಪತ್ರ ಬರೆದು ಶುಭ ಕೋರಿದ್ದಾರೆ.
ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವಿಡಿಯೋ ಮಾಡಿ ತಿಳಿಸಿದ್ದರೂ ಅಭಿಮಾನಿಗಳ ಸಂಭ್ರಮ ಕಡಿಮೆಯಾಗಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ ಅಭಿಮಾನಿಗಳನ್ನು ಸೆಲೆಬ್ರಿಟಿಸ್ ಎಂದು ಕರೆದು ಪತ್ರ ಬರೆದಿದ್ದಾರೆ.
ಪ್ರತದಲ್ಲಿ ಏನಿದೆ?
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…