ಮನರಂಜನೆ

ನೆಚ್ಚಿನ ಸೆಲೆಬ್ರಿಟಿಗಳಿಗೆ ಪತ್ರ ಬರೆದ ದರ್ಶನ್‌

ಬೆಂಗಳೂರು: ತಮ್ಮ 48ನೇ ಹುಟ್ಟು ಹಬ್ಬದ ಪ್ರಯುಕ್ತ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಅವರು ನೆಚ್ಚಿನ ಅಭಿಮಾನಿಗಳಿಗೆ ಪತ್ರ ಬರೆದು ಶುಭ ಕೋರಿದ್ದಾರೆ.

ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ ಎಂದು ವಿಡಿಯೋ ಮಾಡಿ ತಿಳಿಸಿದ್ದರೂ ಅಭಿಮಾನಿಗಳ ಸಂಭ್ರಮ ಕಡಿಮೆಯಾಗಿಲ್ಲ. ಈ ಕಾರಣಕ್ಕೆ ತನ್ನ ಪ್ರೀತಿಯ ಅಭಿಮಾನಿಗಳನ್ನು ಸೆಲೆಬ್ರಿಟಿಸ್ ಎಂದು ಕರೆದು ಪತ್ರ ಬರೆದಿದ್ದಾರೆ.

ಪ್ರತದಲ್ಲಿ ಏನಿದೆ?

ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.

ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

2 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

2 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

2 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

2 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

3 hours ago