ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಡಿಸೆಂಬರ್.25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಸುದೀಪ್ ಯುದ್ಧ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಅಭಿಮಾನಿಗಳು ನೀವು ಸುಮ್ಮನೆ ಇರಬೇಡಿ. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಯಾಕೆ ಮಾಡುತ್ತಿದ್ದೇವೆ ಎಂದರೆ ಇಲ್ಲಿಂದ ಮಾತನಾಡಿದರೆ ಕೆಲವೊಬ್ಬರಿಗೆ ತಟ್ಟುತ್ತದೆ. ಅದಕ್ಕೆ ಇಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದಿದ್ದಾರೆ.
ಇದನ್ನು ಓದಿ: ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್ ಬಗ್ಗೆ ಚರ್ಚೆ : ಏನದು?
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಾತನಾಡಿದ ಸುದೀಪ್ ಅವರು, ಯುದ್ಧಕ್ಕೆ ಸಿದ್ಧವಾಗಿದ್ದೇವೆ ಎಂದು ಗುಡುಗಿದ್ದಾರೆ.
ಈ ಬಗ್ಗೆ ಮಾತನಾಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು, ದರ್ಶನ್ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಅಭಿಮಾನಿಗಳ ಬಗ್ಗೆ ಹೊರಗಡೆ ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾರೆ. ಟಿವಿ ಸಂದರ್ಶನದಲ್ಲಿ, ಸ್ಟೇಜ್ ಮೇಲೆ ಮಾತಾಡ್ತಾರೆ. ಆದರೆ ದರ್ಶನ್ ಇದ್ದಾಗ ಮಾತ್ರ ಅವರು ಗೊತ್ತೇ ಆಗದಂತೆ ಇರುತ್ತಾರೆ. ಬೆಂಗಳೂರಿನಲ್ಲಿ ಇದ್ದಾರಾ ಎಂದು ಗೊತ್ತೇ ಆಗದಂತೆ ಇರುತ್ತಾರೆ. ಟೀಕಿಸುವವರ ಬಗ್ಗೆ ದರ್ಶನ್ ತಲೆಕೆಡಿಸಿಕೊಳ್ಳುವುದಿಲ್ಲ. ಬೇಜಾರು ಮಾಡಿಕೊಳ್ಳುವುದಿಲ್ಲ. ದರ್ಶನ್ ಅಭಿಮಾನಿಗಳಾದ ನೀವು ಕೂಡ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.





