ಮನರಂಜನೆ

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌ ಯುದ್ಧ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಅಭಿಮಾನಿಗಳು ನೀವು ಸುಮ್ಮನೆ ಇರಬೇಡಿ. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಯಾಕೆ ಮಾಡುತ್ತಿದ್ದೇವೆ ಎಂದರೆ ಇಲ್ಲಿಂದ ಮಾತನಾಡಿದರೆ ಕೆಲವೊಬ್ಬರಿಗೆ ತಟ್ಟುತ್ತದೆ. ಅದಕ್ಕೆ ಇಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದಿದ್ದಾರೆ.‌

ಇದನ್ನು ಓದಿ: ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಮಾತನಾಡಿದ ಸುದೀಪ್‌ ಅವರು, ಯುದ್ಧಕ್ಕೆ ಸಿದ್ಧವಾಗಿದ್ದೇವೆ ಎಂದು ಗುಡುಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು, ದರ್ಶನ್‌ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಅಭಿಮಾನಿಗಳ ಬಗ್ಗೆ ಹೊರಗಡೆ ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾರೆ. ಟಿವಿ ಸಂದರ್ಶನದಲ್ಲಿ, ಸ್ಟೇಜ್‌ ಮೇಲೆ ಮಾತಾಡ್ತಾರೆ. ಆದರೆ ದರ್ಶನ್‌ ಇದ್ದಾಗ ಮಾತ್ರ ಅವರು ಗೊತ್ತೇ ಆಗದಂತೆ ಇರುತ್ತಾರೆ. ಬೆಂಗಳೂರಿನಲ್ಲಿ ಇದ್ದಾರಾ ಎಂದು ಗೊತ್ತೇ ಆಗದಂತೆ ಇರುತ್ತಾರೆ. ಟೀಕಿಸುವವರ ಬಗ್ಗೆ ದರ್ಶನ್‌ ತಲೆಕೆಡಿಸಿಕೊಳ್ಳುವುದಿಲ್ಲ. ಬೇಜಾರು ಮಾಡಿಕೊಳ್ಳುವುದಿಲ್ಲ. ದರ್ಶನ್‌ ಅಭಿಮಾನಿಗಳಾದ ನೀವು ಕೂಡ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

36 mins ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

1 hour ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

3 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago