ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅಸ್ಸಾಂನ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ವಿಜಯಲಕ್ಷ್ಮಿ ಅವರು ತುಂಬಾ ದೈವ ಭಕ್ತಿ ಉಳ್ಳವರು. ಆಗಾಗ ಶಕ್ತಿ ದೇವತೆಯ ಮೊರೆ ಹೋಗುತ್ತಾರೆ. ಇದೀಗ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ. ಅಲ್ಲಯೇ ಕೆಲ ಕಾಲ ಸಮಯ ಕಳೆದಿದ್ದಾರೆ.
ಇನ್ನು ಈ ಹಿಂದೆ ದರ್ಶನ್ ಅವರು ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಸಂದರ್ಭದಲ್ಲಿ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು.