ನವದೆಹಲಿ: ಕಾಂಗ್ರೆಸ್ ಪರವಾಗಿ ಮಾತನಾಡಿರುವಂತೆ ನಕಲಿ ರಾಜಕೀಯ ಜಾಹಿರಾತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬಗ್ಗೆ ಬಾಲಿವುಡ್ ಸ್ಟಾರ್ ಅಮೀರ್ ಖಾನ್ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರದರ್ಶನ ಕಾರ್ಯಕ್ರಮವಾದ ಸತ್ಯಮೇವ ಜಯತೆ ಸಂಚಿಕೆಯನ್ನು ಒಳಗೊಂಡಂತೆ ಬಿಜೆಪಿಯೂ ನಾಗರೀಖರ ಬ್ಯಾಂಕ್ ಖಾತೆಗೆ 15 ಲಕ್ಷ ಜಮೆ ಮಾಡುವ ಭರವಸೆಯನ್ನು ಟೀಕಿಸುತ್ತಿರುವ ರೀತಿಯಲ್ಲಿ ವಿವಾದಿತ ಜಾಹೀರಾತು ಹರಿದಾಡುತ್ತಿದ್ದು, ಇದಕ್ಕೆ ಅಮೀರ್ ಖಾನ್ ದೃಶ್ಯವನ್ನು ಸೇರಿಸಲಾಗಿದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಅಮೀರ್ ಖಾನ್ ದೂರಿನಲ್ಲಿ ಮನವಿ ಮಾಡಿದ್ದಾರೆ.
ಅಮೀರ್ ಖಾನ್ ಅವರು, ಈ ಹಿಂದಿನ ಹಲವು ಚುನಾವಣೆಗಳಲ್ಲಿ ಚುನಾವಣಾ ಆಯೋಗದ ಸಾರ್ವಜನಿಕ ಜಾಗೃತಿ ಅಭಿಯಾನಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಆದರೆ ಅವರ 35 ವರ್ಷಗಳ ವೃತ್ತಿ ಜೀವನದಲ್ಲಿ ಯಾವುದೇ ರಾಜಕೀಯ ಪಕ್ಷದ ಜೊತೆ ಧನಿ ಗೂಡಿಸಿಲ್ಲ ಎಂದು ಖಾನ್ ವಕ್ತಾರರು ಹೇಳಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…