ಈ ಹಿಂದೆ ‘ಧೂದ್ ಸಾಗರ್’, ‘ಡ್ರೀಮ್ ಗರ್ಲ್’ ಮುಂತಾದ ಕೆಲವು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದ ದೀಪಿಕಾ ದಾಸ್, ಆ ನಂತರ ಕಿರುತೆರೆಯತ್ತ ಹೊರಟಿದ್ದರು. ‘ಬಿಗ್ ಬಾಸ್’ ಕಾರ್ಯಕ್ರಮದ ಎರಡು ಸೀಸನ್‍ಗಳಲ್ಲಿ ಭಾಗವಹಿಸಿದ ನಂತರ ಅವರು ಮತ್ತೆ ಸಿನಿಮಾಗಳತ್ತ ಮುಖ ಮಾಡಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಪಾರು ಪಾರ್ವತಿ’ ಎಂಬ ಚಿತ್ರದಲ್ಲಿಲ ನಟಿಸಿದ್ದಾರೆ.
1836 ಪಿಕ್ಚರ್ಸ ಲಾಂಛನದಲ್ಲಿ ಪಿ.ಬಿ. ಪ್ರೇಮನಾಥ್ ನಿರ್ಮಿಸಿರುವ, ರೋಹಿತ್ ಕೀರ್ತಿ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಪಾರು ಪಾರ್ವತಿ’ ಚಿತ್ರದ ಶೀರ್ಷಿಕೆ ಅನಾವರಣ ಮತ್ತು ನಿರ್ಮಾಣ ಸಂಸ್ಥೆಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಈ ಚಿತ್ರದಲ್ಲಿ ದೀಪಿಕಾ ದಾಸ್ ಜೊತೆಗೆ ಪೂನಂ ಸರ್ ನಾಯಕ್ ಹಾಗೂ ಫವಾಜ್ ಅಶ್ರಫ್ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಇದೊಂದು ಪ್ರಯಾಣದ ಕಥೆಯಂತೆ. ಈ ಹಿಂದೆ ಪಿ. .ವಾಸು, ಅರವಿಂದ್ ಶಾಸ್ತ್ರಿ, ಸುನಿ ಮುಂತಾದ ನಿರ್ದೇಶಕರ ಸಿನಿಮಾಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ರೋಹಿತ್ ಕೀರ್ತಿ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿದ ಅವರು, ‘ನನಗೆ ಇದು ಮೊದಲ ನಿರ್ದೇಶನದ ಚಿತ್ರ. ಇದೊಂದು ಅಡ್ವೆಂಚರ್ಸ್ ಮತ್ತು ಪ್ರವಾಸ ಕಥನ. ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಉತ್ತರ ಕಾಂಡದಲ್ಲಿ ಚಿತ್ರೀಕರಣ ನಡೆದಿದೆ. ಮೂರು ಮುಖ್ಯ ಪಾತ್ರಗಳ ಸುತ್ತ ಸಿನಿಮಾ ಕಥೆ ಸಾಗುತ್ತದೆ. ಪಾಯಲ್ ಎಂಬ ಪಾತ್ರದಲ್ಲಿ ದೀಪಿಕಾ ದಾಸ್ ಕಾಣಿಸಿಕೊಂಡಿದ್ದಾರೆ. ನಿಜಜೀವನದಲ್ಲೂ ಅಡ್ವೆಂಚರ್ಸ್ ಹಾಗೂ ಜರ್ನಿಯಲ್ಲಿ ಆಸಕ್ತಿಯಿರುವ ದೀಪಿಕಾ ದಾಸ್ ಅವರಿಗೆ ಇದು ಹೇಳಿ ಮಾಡಿಸಿದ ಪಾತ್ರ. ಈವರೆಗೂ ನೀವು ನೋಡಿರದ ದೀಪಿಕಾ ದಾಸ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಇನ್ನೆರಡು ಪ್ರಮುಖ ಪಾತ್ರಗಳ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ’ ಎಂದರು.
ನನಗೆ ಮೊದಲಿನಿಂದಲೂ ಪ್ರವಾಸ ಹಾಗೂ ಅಡ್ವೆಂಚರ್ಸ್ ನಲ್ಲಿ ಆಸಕ್ತಿ ಎಂದ ದೀಪಿಕಾ ದಾಸ್, ‘ಈ ಚಿತ್ರದಲ್ಲಿ ನಾನು ಏಕಾಂಗಿ ಸಂಚಾರಿ. ಪಾಯಲ್ ನನ್ನ ಪಾತ್ರದ ಹೆಸರು. ಪ್ರಯಾಣದಲ್ಲೇ ಚಿತ್ರದ ಹೆಚ್ಚು ಕಥೆ ನಡೆಯುತ್ತದೆ. ಈ ಚಿತ್ರಕ್ಕಾಗಿ ನಾನು ಒಂದು ತಿಂಗಳಲ್ಲಿ ಹತ್ತು ಕೆಜಿ ತೂಕ ಇಳಿಸಿಕೊಂಡಿದ್ದೇನೆ ಹಾಗೂ ಉದ್ದವಾದ ಕೂದಲನ್ನು ಗಿಡ್ಡ ಮಾಡಿಕೊಂಡಿದ್ದೇನೆ. ನನ್ನ ಪಾತ್ರ ಕೇಳಿದ್ದನ್ನು ಮಾಡಿದ್ದೇನೆ. ಈ ಚಿತ್ರದಲ್ಲಿ ನಮ್ಮಷ್ಟೇ ಮುಖ್ಯ ಪಾತ್ರ ವಹಿಸಿರುವುದು ಚಿತ್ರದಲ್ಲಿ ನಾವು ಸಂಚಾರಿಸಿರುವ ಕಾರು’ ಎಂದರು.
ನಿರ್ಮಾಪಕ ಪ್ರೇಮನಾಥ್ ಮೂಲತಃ ಐಟಿ ಉದ್ಯೋಗಿಯಂತೆ ಸಿನಿಮಾ ನಿರ್ಮಾಣ ಮಾಡುವ ಆಸೆ ಇದ್ದುದರಿಂದ ಈ ಚಿತ್ರದ ನಿರ್ಮಾಣಕ್ಕೆ ಕೈಹಾಕಿದ್ದಾರೆ. ‘ ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ನಾನು ಕೆಲಸದ ಮೇಲೆ ಅನೇಕ ಊರುಗಳಲ್ಲಿ ವಾಸವಾಗಿದ್ದೆ. ಇದು ಕೂಡ ಒಂದು ಪ್ರವಾಸದ ಕಥೆಯಾಗಿರುವುದರಿಂದ ಇಷ್ಟವಾಯಿತು. ಇನ್ನು, ನಮ್ಮ 1836 ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಉದ್ಘಾಟನೆಯಾಗಿದೆ. 1836 ಕೂಡಿದಾಗ 9 ಬರುತ್ತದೆ. ಅದು ನನ್ನ ಲಕ್ಕಿ ನಂಬರ್’ ಎಂದರು.
‘ಪಾರು ಪಾರ್ವತಿ’ ಚಿತ್ರಕ್ಕೆ ಅಬಿನ್ ರಾಜೇಶ್ ಛಾಯಾಗ್ರಹಣ, ಾರ್ ಹರಿ ಸಂಗೀತವಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…