ಮನರಂಜನೆ

ಮೈಸೂರಿನ ಮಹಾರಾಜರನ್ನೂ ವಿದೂಷಕರನ್ನಾಗಿಸಲು ಹೊರಟ ದಿಲ್ಲಿಯ ಮಹಾಪ್ರಭು: ಪ್ರಕಾಶ್‌ ರೈ

ಮೈಸೂರು: ಮಹಾಪ್ರಭುವಿನ ದಿಲ್ಲಿಯ ಆಸ್ಥಾನಕ್ಕೆ ಬೇಕಿರುವುದು ವಿದೂಷಕರೇ. ಈ ವಿದೂಷಕರು ಬರ ಪರಿಹಾರ ಮುಂತಾದವುಗಳ ಬಗ್ಗೆ ಮಾತನಾಡುವುದಿಲ್ಲ. ಈಗ ಮಹಾಪ್ರಭು ಮೈಸೂರಿನ ಮಹಾರಾಜರನ್ನೂ ವಿದೂಷಕರನ್ನಾಗಿಸಲು ಹೊರಟಿದ್ದಾರೆ. ಅವೇರೆಕೆ ಒಪ್ಪಿಕೊಂಡರೋ ನಮಗೆ ಗೊತ್ತಿಲ್ಲ. ಆದರೆ, ಅವರನ್ನು ತಡೆಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಖ್ಯಾತ ಚಿತ್ರನಟ ಪ್ರಕಾಶ್‌ ರೈ ಹೇಳಿದರು.

ಡಾ.ಬಿ.ಆರ್‌ ಅಂಬೇಡ್ಕರ್‌ ಜಯಂತಿ ಆಚರಣೆ ಅಂಗವಾಗಿ ಭಾರತ ಸಂವಿಧಾನ ಪ್ರಜಾಪ್ರಭುತ್ವದ ಉಳಿವಿಗಾಗಿ ದಲಿತ ಸಂಘರ್ಷ ಸಮಿತಿಯಿಂದ ಇಲ್ಲಿನ ಎಂ.ಜಿ ರಸ್ತೆಯ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಯಾದ 27 ಮಂದಿ ಕೂಡ ವಿದೂಷಕರು. ಅವರು ಇದುವರೆಗೂ ರಾಜ್ಯದ ಸಮಸ್ಯೆಗಳ ಬಗೆ ಮಹಾಪ್ರಭುವಿನ ಬಳಿ ತುಟಿಬಿಚ್ಚಿಲ್ಲ, ಅಂತಹ ವಿದೂಷಕರು ನಮಗೇಕೆ ಬೇಕು ಎಂದು ಪ್ರಶ್ನಿಸಿದರು.

ಬಿಜೆಪಿಯವರು 400 ಸ್ಥಾನ ಗಳಿಸುತ್ತೇವೆ ಎನ್ನುತ್ತಾರೆ. ಅದು ಅವರ ನಂಬಿಕೆ ಅಲ್ಲ, ಭಯ. ತುಂಬಾ ವಿಶ್ವಾಸದಿಂದ ಮಾತನಾಡಿದಾಗ, ಪ್ರಶ್ನಿಸುವವರನ್ನು ಜೈಲಿಗೆ ಕಳುಹಿಸಿದಾಗ, ಇಡಿಯಿಂದ ದಾಳಿ ಮಾಡಿಸಿದಾಗ ಅವರು ಹೆದರಿದ್ದಾರೆ ಎನ್ನುವುದು ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ನಾನು ಬಲಶಾಲಿ ಅಲ್ಲ, ತುಂಬಾ ಬಲಹೀನ ಆಗುತ್ತಿದ್ದೇನೆ ಎನ್ನುವುದು ಗೊತ್ತಾಗಿರುವುದರಿಂದಲೇ ಮಹಾಪ್ರಭುವಿ ಮುಖದಲ್ಲಿ ಆತಂಕ ಗೋಚರಿಸುತ್ತಿದೆ ಎಂದು ಟೀಕಿಸಿದರು.

ಅವರನ್ನು ಮಹಾಪ್ರಭು ಎಂದೇಕೆ ಕರೆಯುತ್ತೇನೆಂದರೆ ಅದರ ಹಿಂದೊಂದು ಮರ್ಮವಿದೆ. ಅಂಬೇಡ್ಕರ್‌ ಸಂವಿಧಾನದ ಪ್ರಕಾರ, ಮಹಾಪ್ರಭು ಎನ್ನುವವರು ಇರಬಾರದು. ಆದರೆ, ಇವರು ಮಹಾಪ್ರಭು ರೀತಿ ಓಡಾಡುತ್ತಿದ್ದಾರೆ. ಮೈಸೂರಿನ ಮಹಾರಾಜರನ್ನು ನೋಡಲು ದಿಲ್ಲಿಯ ಮಹಾಪ್ರಭು ಬರುತ್ತಾರೆ. ಈ ಪ್ರಸಂಗ ನೋಡಲು ಜನರನ್ನು ಕರೆತರಲು ಸಾಕಷ್ಟು ಬಸ್‌ಗಳು ಓಡಾಡಿದವು. ಆದರೆ, ಕೋವಿಡ್‌ ಸಂಕಷ್ಟ ಕಾಲದಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರಿಗೇಕೆ ಒಂದು ಬಸ್‌ ಕೂಡ ಓಡಿಸಲಿಲ್ಲ ಎಂದು ನಾವೆಲ್ಲೂರು ಕೇಳಬೇಕು ಎಂದರು.

ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ಹಾದಿ ತಪ್ಪಿದ್ದಾರೆ ಎಂದು ಕುಮಾರಣ್ಣ ಹೇಳಿಕೆ ನೀಡಿದ್ದಾರೆ. ನೀವು ದಾರಿ ತಪ್ಪಿ ಎಷ್ಟು ವರ್ಷವಾಯಿತು? ಎಲ್ಲಿ ಓಡಾಡಿಕೊಂಡಿದ್ದೀರಿ, ಇನ್ನೂ ಒಂದ್ಕಡೆ ಸೇರಿಕೊಂಡಿಲ್ಲವಲ್ಲ ಎಂದು ವ್ಯಂಗ್ಯವಾಗಿ ಕೇಳಿದರು.

ಪ್ರಹಾಪ್ರಭುವಿನ ಆಳ್ವಿಕೆ ನ್ಯಾಯವಾಗಿಲ್ಲ, ಇದು ಅಮಾನವೀಯವಾದುದು. ಇದಕ್ಕೆ ನಾವು ಮೋಸ ಹೋಗಬಾರದು, ದೇಶದಲ್ಲಿ ಬದಲಾವಣೆ ವಿರೋಧ ಪಕ್ಷದಿಂದ ಅಥವಾ ಆಳುವ ಪಕ್ಷದಿಂದಲೂ ಆಗುತ್ತಿಲ್ಲ. ನಮ್ಮಿಂದ ಮಾತ್ರವೇ ಬದಲಾವಣೆ ಸಾಧ್ಯ. ಈ ಬಾರಿಯ ಚುನಾವಣೆಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು, ಇದಕ್ಕೂ ಮುನ್ನ ಈ ಕೊರೊನಾ ಸೋಂಕನ್ನು ಕೆಳಗಿಳಿಸೋಣ ಎಂದು ಕರೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

5 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

14 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago