devasasya kannada movie teaser (1)
ಈ ಹಿಂದೆ ಬಸ್, ಆಟೋ ಓಡಿಸುತ್ತಿದ್ದ ಹಲವರು ಕನ್ನಡ ಚಿತ್ರರಂಗದಲ್ಲಿ ಹೀರೋಗಳಾಗಿ ಮಿಂಚಿದ್ದಾರೆ. ಇದೀಗ ಟ್ರ್ಯಾಕ್ಟರ್ ಓಡಿಸಿಕೊಂಡಿದ್ದ ಯುವಕನೊಬ್ಬ ಸದ್ದಿಲ್ಲದೆ ಹೀರೋ ಆಗಿದ್ದಾರೆ. ಕನ್ನಡದಲ್ಲಿ ‘ದೇವಸಸ್ಯ’ ಎಂಬ ಚಿತ್ರ ಸದ್ದಿಲ್ಲದೆ ನಿರ್ಮಾಣವಾಗುತ್ತಿದ್ದು, ಈ ಚಿತ್ರದ ಮೂಲಕ ಸೆಲ್ವಿನ್ ದೇಸಾಯಿ ಹೀರೋ ಆಗುತ್ತಿದ್ದಾರೆ.
‘ದೇವಸಸ್ಯ’ ಒಂದು ಅಪರೂಪದ ಗಿಡದ ಸುತ್ತ ನಡೆಯುವ ಘಟನೆಗಳ ಗುಚ್ಛ. ಬಹುತೇಕ ಉತ್ತರ ಕನ್ನಡದವರೇ ಸೇರಿ ಮಾಡಿರುವ ಪ್ಯಾನ್ ಇಂಡಿಯಾ ಚಿತ್ರವಿದು. ಈ ಚಿತ್ರವನ್ನು ಅನಂತ ಫಿಲಂಸ್ ಅಡಿಯಲ್ಲಿ ಅನಂತಕುಮಾರ್ ಹೆಗಡೆ ನಿರ್ಮಿಸಿದರೆ, ಕಾರ್ತಿಕ್ ಭಟ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ನಟ-ನಿರ್ದೇಶಕ ನವೀನ್ ಕೃಷ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.
ನಿರ್ದೇಶಕ ಕಾರ್ತೀಕ್ ಭಟ್ ಮಾತನಾಡಿ, `ಕೆಲವು ಸಿನಿಮಾ ಮತ್ತು ಧಾರಾವಾಹಿಗಳಿಗೆ ಬರಹಗಾರನಾಗಿ ಕೆಲಸ ಮಾಡಿದ್ದೇನೆ. ಶಿರಸಿ ಸುತ್ತಮುತ್ತಲಿನ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಸಮುದಾಯದ ಕಥೆಯಿದು. ಇದು ಎರಡು ಊರುಗಳ ಮಧ್ಯೆ ನಡೆಯುವ ಕಥೆ. ಸಿದ್ದಿ ಹುಡುಗನ ಪಾತ್ರವನ್ನು ಸೆಲ್ವಿನ್ ದೇಸಾಯಿ ಮಾಡಿದ್ದಾರೆ. ಮತ್ತೊಂದು ಮುಖ್ಯ ಪಾತ್ರವನ್ನು ಅಹನ ಮಾಡಿದ್ದಾರೆ. 1995ರಲ್ಲಿ ನಡೆವ ಕಥೆಯಾಗಿದ್ದರಿಂದ ಅಂಥಾ ಲೊಕೇಶನ್ ಎಲ್ಲೂ ಸಿಗಲಿಲ್ಲ. ಅದೇ ಕಾರಣಕ್ಕೆ ಸೆಟ್ ಹಾಕಿಸಿ ಚಿತ್ರೀಕರಣ ಮಾಡಿದ್ದೇವೆ. ಈಗಾಗಲೇ 45 ದಿನಗಳ ಶೂಟಿಂಗ್ ನಡೆದಿದೆ’ ಎಂದರು.
ಸೆಲ್ವಿನ್ ಚಿತ್ರದಲ್ಲಿ ನಟಿಸಬೇಕು ಎಂಬ ಉದ್ದೇಶದಿಂದ ಬೆಂಗಳೂರಿಗೆ ಬಂದರಂತೆ. ‘ಆರಂಭದಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿದ್ದೆ. ಆಗ ನಿರ್ದೇಶಕರು ಈ ಸಿನಿಮಾಗೆ ಕರೆದರು. ನಂತರ ಸಿನಿಮಾ ಬಗ್ಗೆ ಹಲವು ವಿಷಯಗಳನ್ನು ಕಲಿಯುತ್ತಾ ಹೋದೆ’ ಎಂದು ವಿವರಿಸಿದರು.
ನಾಯಕಿ ಬಿಂಬಿಕಾ ಮಾತನಾಡಿ, ‘ಚಿತ್ರದಲ್ಲಿ ನಾನು ಮಾತಂಗಿ ಎಂಬ ಸಿದ್ದಿ ಜನಾಂಗದ ಹುಡುಗಿಯಾಗಿ ನಟಿಸಿದ್ದೇನೆ. ‘ನಾರಾಯಣ ನಾರಾಯಣ’ ನಂತರ ಇದು ನನ್ನ 5ನೇ ಚಿತ್ರ’ ಎಂದರು.
ಈ ಚಿತ್ರಕ್ಕೆ ರಾಜು ಎನ್.ಎಂ ಅವರ ಛಾಯಾಗ್ರಹಣ, ಹರಿ ಅಜಯ್ ಅವರ ಸಂಗೀತವಿದೆ.
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…