ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ನಟ ದರ್ಶನ್ ಟೀಶರ್ಟ್ ಹಾಕಿಕೊಂಡು ಅಭಿಮಾನಿಗಳು ಥಿಯೇಟರ್ ಎದುರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದೆ.
ಡೆವಿಲ್ ಚಿತ್ರಕ್ಕೆ ಪ್ರಕಾಶ್ ವೀರ್ ಆಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಬೆಳಿಗ್ಗೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದ್ದು, ಎಲ್ಲಾ ಶೋಗಳು ಹೌಸ್‌ಫುಲ್ ಆಗಿವೆ.





