ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಹೀಗಾಗಿ ‘ಡೆವಿಲ್’ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿರಬಹುದು ಎಂಬ ಲೆಕ್ಕಾಚಾರಗಳು ಶುರುವಾಗಿವೆ.
ಡೆವಿಲ್ ಸಿನಿಮಾ ಮೊದಲ ದಿನ ಸುಮಾರು 10 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಗಳು ಹೇಳಿವೆ. ಇದು ಕರ್ನಾಟಕದ ಕಲೆಕ್ಷನ್ ಮಾತ್ರ. ವಿದೇಶದ ಗಳಿಕೆಯೂ ಸೇರಿದರೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸಿನಿಮಾಗಳಿಕೆ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಇಷ್ಟು ದೊಡ್ಡ ಕಲೆಕ್ಷನ್ ಆಗಲು ಚಿತ್ರದ ಟಿಕೆಟ್ ಬೆಲೆ ಕೂಡ ಕಾರಣ.
ಇದನ್ನೂ ಓದಿ:-ಮಳವಳ್ಳಿ | ವಿದ್ಯುತ್ ಸ್ಪರ್ಶ ; ಕಾರ್ಮಿಕ ಸಾವು
ಪಿವಿಆರ್, ಐನಾಕ್ಸ್ ಸೇರಿದಂತೆ ಬಹುತೇಕ ಮಲ್ಟಿಪ್ಲೆಕ್ಸ್ಗಳಲ್ಲಿ ಟಿಕೆಟ್ ದರ ಕನಿಷ್ಠ 500 ರೂಪಾಯಿ ಇಂದ ಆರಂಭ ಆಗಿತ್ತು. ಏಕ ಪರದೆಯಲ್ಲಿ 400 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಗಿತ್ತು. ಇದರಿಂದ ಹೆಚ್ಚಿನ ಕಲೆಕ್ಷನ್ ಆಗಿದೆ ಎನ್ನಲಾಗಿದೆ.





