ಚೆನ್ನೈ : ಕಾಲಿವುಡ್ ನಟ ಧನುಷ್ ಸ್ಟಾರ್ ನಟಿಯನ್ನು ಕೈ ಹಿಡಿಯಲು ಸಿದ್ದರಾಗಿದ್ದಾರೆ. ಹೌದು ಹೀಗೊಂದು ಸುದ್ದಿ ಸಿನಿಮಾ ಇಂಡಸ್ಟ್ರಿಯಲ್ಲಿ ಗುಲ್ ಹಬ್ಬಿಸಿದೆ.
ಧನುಷ್ ನಟಿ ಮೃಣಾಲ್ ಠಾಕೂರ್ ಜೊತೆ ಎರಡನೇ ವಿವಾಹವಾಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗ್ತಿದೆ. ಇತ್ತೀಚೆಗೆ ಧನುಷ್ ಹಾಗೂ ಮೃಣಾಲ್ ಠಾಕೂರ್ ಹಲವಾರು ವೇದಿಕೆಯಲ್ಲಿ, ಪಾರ್ಟಿಗಳಲ್ಲಿ, ಹುಟ್ಟುಹಬ್ಬದ ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದರು. ಜೊತೆಗೆ ಧನುಷ್ ಹಾಕಿರುವ ಪೋಸ್ಟ್‌ಗಳಿಗೆ ಮೃಣಾಲ್ ಲೈಕ್ ಕೊಡೋದು ಕಮೆಂಟ್ಸ್ ಹಾಕೋದು ಮಾಡುತ್ತಿದ್ದರು. ಇವೆಲ್ಲ ಘಟನೆಗಳು ಅವ್ರಿಬ್ಬರ ಮಧ್ಯೆ ಗಾಸಿಪ್ ಸೃಷ್ಟಿಸಿತ್ತು. ಆದ್ರೆ ಇದೆಲ್ಲದಕ್ಕೂ ಈಗ ತೆರೆ ಎಳೆಯುವ ಸಮಯ ಬಂದಂತಿದೆ. ಅಂದಹಾಗೆ ಮೃಣಾಲ್ ಹಾಗೂ ಧನುಷ್ ಸನ್ ಆಫ್ ಸರ್ಧಾರ್-2 ಸಿನಿಮಾದ ಪ್ರೀಮಿಯರ್‌ನಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡ ಬಳಿಕವಂತೂ ಪ್ರೀತಿ, ಪ್ರೇಮದ ಗುಲ್ಲು ಜೋರಾಗಿತ್ತು. ಇದೀಗ ಇಬ್ಬರೂ ಮದುವೆ ಆಗುತ್ತಿದ್ದಾರೆ ಎನ್ನಲಾಗ್ತಿದೆ. ಅದ್ರಲ್ಲೂ ಫೆಬ್ರವರಿ 14ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಅಂದಹಾಗೆ ಧನುಷ್ ಈ ಮೊದಲು ರಜನಿಕಾಂತ್ ಅವರ ಮಗಳು ಐಶ್ವರ್ಯ ಅವರನ್ನು ಮದುವೆಯಾಗಿ 20ವರ್ಷ ಸಂಸಾರ ನಡೆಸಿ 2024ರಲ್ಲಿ ಇಬ್ಬರು ವೈವಾಹಿಕ ಜೀವನಕ್ಕೆ ಗುಡ್ ಬೈ ಹೇಳಿದ್ದರು.
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಸಾಂಪ್ರದಾಯಿಕವಾಗಿ…
ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…