ಡಾ. ರಾಜಕುಮಾರ್ ಅವರ ಮೊಮ್ಮಗಳು ಮತ್ತು ರಾಮ್‍ಕುಮಾರ್ ಮಗಳಾದ ಧನ್ಯಾ ರಾಮ್‍ಕುಮಾರ್ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ಮೊದಲು ‘ಹೈಡ್ ಆ್ಯಂಡ್ ಸೀಕ್’ ಎಂಬ ಚಿತ್ರ ಬಂತು. ನಂತರ ‘ದಿ ಜಡ್ಜ್ಮೆಂಟ್’ ಚಿತ್ರ ಬಿಡುಗಡೆಯಾಯಿತು. ಕಳೆದ ವಾರ ‘ಪೌಡರ್’ ಚಿತ್ರ ಹೊರಬಂತು. ಈ ಮೂರೂ ಚಿತ್ರಗಳು ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಧನ್ಯಾ ಅಭಿನಯದ ಇನ್ನೊಂದು ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಚಿತ್ರ ಸೆ. 13ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.
ಅಂದಹಾಗೆ, ಈ ಚಿತ್ರದ ಹೆಸರು ‘ಕಾಲಾಪತ್ಥರ್’. ‘ದುನಿಯಾ’ ಸೂರಿ ನಿರ್ದೇಶನದ ‘ಕೆಂಡಸಂಪಿಗೆ’ ಚಿತ್ರದ ನಾಯಕನಾಗಿ ಅಭಿನಯಿಸಿದ್ದ ವಿಕ್ಕಿ ವರುಣ್, ನಾಯಕನಾಗಿ ನಟಿಸಿದ ಚಿತ್ರವಿದು. ವಿಕ್ಕಿ ಈ ಚಿತ್ರಕ್ಕೆ ಬರೀ ನಾಯಕನಷ್ಟೇ ಅಲ್ಲ, ನಿರ್ದೇಶಕರೂ ಹೌದು. ಸೂರಿ ಗರಡಿಯಲ್ಲಿ ಪಳಗಿದ್ದ ವಿಕ್ಕಿ, ಸೂರಿ ನಿರ್ದೇಶನದ ಕೆಲವು ಚಿತ್ರಗಳಿಗೆ ಸಹಾಯಕರಾಗಿ ಕೆಲಸ ಮಾಡಿದ್ದರು. ಈಗ ಮೊದಲ ಬಾರಿಗೆ ‘ಕಾಲಾಪತ್ಥರ್’ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.
ಈ ಚಿತ್ರದಲ್ಲಿ ಧನ್ಯ, ಗಂಗಾ ಎಂಬ ಶಾಲಾಶಿಕ್ಷಕಿಯ ಪಾತ್ರ ನಿರ್ವಹಿಸಿದ್ದಾರಂತೆ. ‘ನನ್ನ ಪಾತ್ರ ಹಾಗೂ ಚಿತ್ರ ಎರಡು ಚೆನ್ನಾಗಿದೆ. ನನಗೆ ಈಗಷ್ಟೇ ವಿಕ್ಕಿ ಅವರು ಚಿತ್ರದ ತುಣುಕು ತೋರಿಸಿದ್ರು. ಅದನ್ನು ನೋಡಿದ ಮೇಲೆ ನಾನಂತೂ ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದೇನೆ’ ಎಂದರು.
ವಿಕ್ಕಿ ಅಭಿನಯದ ‘ಕೆಂಡಸಂಪಿಗೆ’ ಚಿತ್ರವು ಒಂಬತ್ತು ವರ್ಷಗಳ ಹಿಂದೆ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆ ಆಗಿತ್ತಂತೆ. ಈಗ ‘ಕಾಲಾಪತ್ಥರ್’ ಚಿತ್ರ ಸಹ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಮಾತನಾಡುವ ವಿಕ್ಕಿ. ‘’‘ಕಾಲಾಪತ್ಥರ್’, ಕಪ್ಪುಕಲ್ಲಿಗೆ ಸಂಬಂಧಿಸಿದ ಕಥೆ. ’ರಾಮ ರಾಮಾ ರೇ’ ಖ್ಯಾತಿಯ ಸತ್ಯಪ್ರಕಾಶ್ ಕಥೆ ಬರೆದಿದ್ದಾರೆ. ವಿಜಾಪುರದ ಬಳಿ ಹೆಚ್ಚು ಚಿತ್ರೀಕರಣವಾಗಿದೆ. ಆಲಮಟ್ಟಿಯ ಹಿನ್ನೀರಿನ ಜೈನಾಪುರ ಎಂಬ ಸ್ಥಳದಲ್ಲಿ ಚಿತ್ರೀಕರಣ ನಡೆದಿದ್ದು, ನಮ್ಮ ಚಿತ್ರದ ಚಿತ್ರೀಕರಣವಾಗಿ ಕೆಲವೇ ತಿಂಗಳಲ್ಲೇ ಈ ಹಳ್ಳಿ ನೀರಿನಲ್ಲಿ ಮುಳುಗಡೆಯಾಗಿದೆ. ನಮ್ಮ ಚಿತ್ರವನ್ನು ‘ಮಾರ್ಟಿನ್’ ಚಿತ್ರದ ನಿರ್ಮಾಪಕರಾದ ಉದಯ್ ಕೆ ಮೆಹ್ತಾ ಅವರು ವಿತರಣೆ ಮಾಡುತ್ತಿದ್ದಾರೆ’ ಎಂದರು.
‘ಕಾಲಾಪತ್ಥರ್’ ಚಿತ್ರವನ್ನು ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ಜೊತೆಯಾಗಿ ನಿರ್ಮಿಸಿದ್ದು, ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…