ಮನರಂಜನೆ

ಪೃಥ್ವಿ ಅಂಬಾರ್‍ ಅಭಿನಯದ ‘ಚೌಕಿದಾರ್’ಗೆ ಧನ್ಯಾ ರಾಮ್‍ಕುಮಾರ್‍ ನಾಯಕಿ

ಡಾ. ರಾಜಕುಮಾರ್ ಮೊಮ್ಮಗಳು ಮತ್ತು ರಾಮ್‍ಕುಮಾರ್‍ ಅವರ ಮಗಳು ಧನ್ಯಾ ರಾಮ್‍ಕುಮಾರ್‍ ಅಭಿನಯದ ‘ನಿನ್ನ ಸನಿಹಕೆ’, ‘ಹೈಡ್‍ ಆ್ಯಂಡ್‍ ಸೀಕ್‍’ ಮತ್ತು ‘ದಿ ಜಡ್ಜ್ಮೆಂಟ್‍’ ಚಿತ್ರಗಳು ಇದುವರೆಗೂ ಬಿಡುಗಡೆಯಾಗಿವೆ. ಆದರೆ, ಯಾವೊಂದು ಚಿತ್ರವೂ ದೊಡ್ಡ ಯಶಸ್ಸು ಕಂಡಿಲ್ಲ. ಹೀಗೆ ಒಂದು ಗೆಲುವಿನ ಹುಡುಕಾಟದಲ್ಲಿರುವ ಧನ್ಯಾ ಇದೀಗ ಹೊಸ ಚಿತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.

‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ, ಪೃಥ್ವಿ ಅಂಬಾರ್‍ ಅಭಿನಯದಲ್ಲಿ ಒಂದು ಹೊಸ ಚಿತ್ರ ನಿರ್ಮಿಸುತ್ತಿರುವ ಸುದ್ದಿ ಈಗಾಗಲೇ ಹಳತಾಗಿದೆ. ಚಿತ್ರಕ್ಕೆ ‘ಚೌಕಿದಾರ್‍’ ಎಂಬ ಹೆಸರನ್ನು ಇಡಲಾಗಿದ್ದು, ಇದೀಗ ಈ ಚಿತ್ರಕ್ಕೆ ಧನ್ಯಾ ರಾಮ್‍ಕುಮಾರ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಇದುವರೆಗೂ ಹಲವು ಚಿತ್ರಗಳಲ್ಲಿ ಲವರ್‌ ಬಾಯ್‌ ಆಗಿ ಕಾಣಿಸಿಕೊಂಡಿದ್ದ ಪೃಥ್ವಿ, ಈ ಚಿತ್ರದಲ್ಲಿ ಆ್ಯಕ್ಷನ್‍ ಹೀರೋ ಆಗಿದ್ದಾರೆ. ಇದೊಂದು ಫ್ಯಾಮಿಲಿ ಚಿತ್ರವಾಗಿದ್ದು, ಸಾಯಿಕುಮಾರ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕಳೆದ ವಾರ ಬಂದಿತ್ತು. ಈಗ ಧನ್ಯಾ ರಾಮ್‍ಕುಮಾರ್‍ ಚಿತ್ರತಂಡದ ಭಾಗವಾಗಿರುವ ಸುದ್ದಿ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಯಾರ್ಯಾರು ನಟಿಸಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದೆ.

ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಡಾ.ಕಲ್ಲಹಳ್ಳಿ ಚಂದ್ರಶೇಖರ್, ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ.

‘ಚೌಕಿದಾರ್’ ಒಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದದು, ಬಹುಭಾಷೆಯಲ್ಲಿ ಮೂಡಿಬರುತ್ತಿರುವ ಚಿತ್ರವಾಗಿದೆ. ಚಿತ್ರಕ್ಕೆ ಬೆಂಗಳೂರಿನ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಜುಲೈ 03ರಂದು ಮುಹೂರ್ತ ನಡೆಯಲಿದೆ. ಆ ದಿನ ಚಿತ್ರತಂಡದಲ್ಲಿ ಇನ್ನೂ ಯಾರೆಲ್ಲಾ ಇರಬಹುದು ಎಂಬ ವಿಷಯ ಸ್ಪಷ್ಟವಾಗಲಿದೆ.

ಈ ಮಧ್ಯೆ, ಧನ್ಯಾ ರಾಮ್‍ಕುಮಾರ್ ‘ಪೌಡರ್‍’ ಮತ್ತು ‘ಕಾಲಾ ಪತ್ಥರ್’ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದು, ಆ ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

ಭೂಮಿಕಾ

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

40 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

1 hour ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

1 hour ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

5 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

5 hours ago