ಆ ಕಡೆ ಹಿರಿಯ ಖಳನಟ ಕೀರ್ತಿರಾಜ್ ಅವರ ಮಗ ಧರ್ಮ ಕೀರ್ತಿರಾಜ್, ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಅವರ ಅಭಿನಯದ ಹೊಸ ಚಿತ್ರವೊಂದರ ಟೀಸರ್ ಸದ್ದಿಲ್ಲದೆ ಬಿಡುಗಡೆಯಾಗಿದೆ. ಅದೇ ‘ಟೆನೆಂಟ್’.
‘ಟೆನೆಂಟ್’ ಎಂದರೆ ಬಾಡಿಗೆದಾರ ಎಂದು ಎಲ್ಲರಿಗೂ ಗೊತ್ತೇ ಇದೆ. ಮನೆಯೊಂದರಲ್ಲಿ ನಡೆಯುವ ಕ್ರೈಮ್ ಥ್ರಿಲ್ಲರ್ ಚಿತ್ರ ಇದು. ಧರ್ಮ ಜೊತೆಗೆ ಸೋನು ಗೌಡ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಮೊದಲ ನೋಟ ಬಿಡುಗಡೆ ಆಗಿದ್ದು, ಇತ್ತೀಚೆಗೆ ಚಿತ್ರದ ಮೊದಲ ಟೀಸರ್ ಬಿಡುಗಡೆ ಆಗಿದೆ.
ವಿಶೇಷವೆಂದರೆ, ಕನ್ನಡ ಚಿತ್ರರಂಗದ ಹಲವು ಗಣ್ಯರು ಸೇರಿ ಈ ಟೀಸರ್ ಬಿಡುಗಡೆ ಮಾಡಿದ್ದಾರೆ. ನಿರ್ದೇಶಕರಾದ ಶಶಾಂಕ್, ಪವನ್ ಒಡೆಯರ್, ಛಾಯಾಗ್ರಹಕರಾದ ಸತ್ಯ ಹೆಗ್ಡೆ, ಡಿಸೈನರ್ ಹಾಗೂ ವಿತರಕಿ ಸಚಿನ್ನಾ ಹೆಗ್ಗಾರ್, ಚಂದನ್ ಶೆಟ್ಟಿ, ನವೀಶ್ ಶಂಕರ್ ಸೇರಿದಂತೆ ಅನೇಕರು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.
‘ಟೆನೆಂಟ್’ ಚಿತ್ರವನ್ನು ನಿರ್ದೇಶಿಸಿರುವುದು ಶ್ರೀಧರ್ ಶಾಸ್ತ್ರಿ. ವಿ.ಎಫ್.ಎಕ್ಸ್ ನಲ್ಲಿ ನಾಲ್ಕು ವರ್ಷಗಳ ಅನುಭವವಿರುವ ಶ್ರೀಧರ್, ಈಗ ಇದೇ ಮೊದಲ ಬಾರಿಗೆ ‘ಟನೆಂಟ್’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದಕ್ಕೂ ಮುನ್ನ ಒಂದಿಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಶ್ರೀಧರ್, ಇದೇ ಮೊದಲ ಬಾರಿಗೆ ಚಿತ್ರ ನಿರ್ದೇನಕ್ಕೆ ಕೈ ಹಾಕಿದ್ದಾರೆ.
ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ, ‘ಟೆನೆಂಟ್’ ಚಿತ್ರವನ್ನು ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಇನ್ನು, ಶ್ರೀಧರ್ ಶಾಸ್ತ್ರಿ ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.
‘ಟೆನೆಂಟ್’ ಚಿತ್ರದಲ್ಲಿ ಧರ್ಮ ಕೀರ್ತಿರಾಜ್, ಸೋನು ಗೌಡ, ತಿಲಕ್ ಜೊತೆಗೆ ರಾಕೇಶ್ ಮಯ್ಯ, ‘ಉಗ್ರಂ’ ಮಂಜು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಗಿರೀಶ್ ಹೊತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ ಮತ್ತು ಮನೋಹರ್ ಜೋಷಿ ಛಾಯಾಗ್ರಹಣವಿದೆ.
‘ಟೆನೆಂಟ್’ ಚಿತ್ರವು ನವೆಂಬರ್ 22ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…