ಮನರಂಜನೆ

ರೌಡಿ ಆಯ್ತು: ಈಗ ಪೊಲೀಸ್‍ ಇನ್‍ಸ್ಪೆಕ್ಟರ್‍ ಆದ ಧರ್ಮ ಕೀರ್ತಿರಾಜ್‍

ಧರ್ಮ ಕೀರ್ತಿರಾಜ್‍ ಇತ್ತೀಚೆಗಷ್ಟೇ, ‘ತಲ್ವಾರ್‍’ ಎಂಬ ಚಿತ್ರದಲ್ಲಿ ರೌಡಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಪೊಲೀಸ್‍ ಇನ್‍ಸ್ಪೆಕ್ಟರ್‍ ಆಗಿದ್ದಾರೆ. ‘ಅಮರಾವತಿ ಪೊಲೀಸ್‍ ಸ್ಟೇಶನ್‍’ ಚಿತ್ರದಲ್ಲಿ ಒಂದಿಷ್ಟು ಜನರ ನಾಪತ್ತೆ ಮತ್ತು ಸಾವಿಗೆ ಕಾರಣರಾದವರ ಬೆನ್ನತ್ತಿ ಹೊರಟಿದ್ದಾರೆ.

ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಎರಡು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಅಮರಾವತಿ ಪೊಲೀಸ್‍ ಸ್ಟೇಷನ್‍’ ಚಿತ್ರದ ಟೀಸರ್‍ ಇತ್ತೀಚೆಗೆ ಬಿಡುಗಡೆಯಾಗಿದೆ. ಪಿ.ಪಿ.ಪವರ್ ಪಿಕ್ಚರ್ಸ್ ಲಾಂಛನದಲ್ಲಿ ಕೆ.ಆರ್. ಪ್ರದೀಪ್ ಕಮಲಪುರ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಒಂದೂರಿನಲ್ಲಿ ಕೆಲವರು ನಿಗೂಢವಾಗಿ ಕಣ್ಮರೆಯಾಗುತ್ತಿರುತ್ತಾರೆ. ಈ ಕೇಸ್‍ ಪತ್ತೆ ಹಚ್ಚುವುದಕ್ಕಾಗಿ ಬರುವ ಪೊಲೀಸ್‍ ಇನ್‍ಸ್ಪೆಕ್ಟರ್‍ ಸಹ ಕಾಣೆಯಾಗುತ್ತಾನೆ. ಇದೆಲ್ಲದರ ಹಿಂದೆ ಇರುವ ಮರ್ಮ ಏನೆಂಬುದನ್ನು ಹೇಳುವ ಚಿತ್ರವೇ ‘ಅಮರಾವತಿ ಪೊಲೀಸ್ ಸ್ಟೇಷನ್’. ಧರ್ಮ ಕೀರ್ತಿರಾಜ್ ಈ ಚಿತ್ರದಲ್ಲಿ ಪೊಲೀಸ್ ಇನ್‍ಸ್ಪೆಕ್ಟರ್ ಆಗಿ ನಟಿಸಿದ್ದು, ಗುರುರಾಜ್ ಜಗ್ಗೇಶ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇದ್ವಿಕ ಚಿತ್ರದ ನಾಯಕಿಯ ಪಾತ್ರ ಮಾಡಿದ್ದಾರೆ.

‘ಅಮರಾವತಿ ಪೊಲೀಸ್ ಸ್ಟೇಷನ್’ ಕುರಿತು ಮಾತನಾಡುವ ನಿರ್ದೇಶಕ ಪುನೀತ್, ‘ಈಗಾಗಲೇ ೩೬ ದಿನಗಳ ಕಾಲ ನಮ್ಮ ಚಿತ್ರದ ಶೇ.೯೦ ಭಾಗದ ಚಿತ್ರೀಕರಣ ನಡೆಸಲಾಗಿದೆ. ಕ್ಲೈಮ್ಯಾಕ್ಸ್ ಹಾಗೂ ಹಾಡೊಂದರ ಶೂಟಿಂಗ್ ಮಾತ್ರವೇ ಬಾಕಿಯಿದೆ. ಅದನ್ನು ಗೋವಾ ಹಾಗೂ ಹಿಂದೂಪುರದಲ್ಲಿ ಚಿತ್ರೀಕರಿಸುವ ಪ್ಲಾನಿದೆ. ಅಲ್ಲದೆ ಮಾರ್ಚ್ ೧೭ರಂದು ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನ ನಮ್ಮ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡುತ್ತಿದ್ದೇವೆ. ಮಾರ್ಚ್ ಕೊನೆಗೆ ಅಥವಾ ಏಪ್ರಿಲ್ ವೇಳೆಗೆ ಸಿನಿಮಾ ಬಿಡುಗಡೆ ಮಾಡುವ ಯೋಚನೆಯಿದೆ’ ಎಂದು ಹೇಳಿದರು.

ತಮ್ಮ ಪಾತ್ರದ ಬಗ್ಗೆ ಮಾತನಾಡುವ ಧರ್ಮ ಕೀರ್ತಿರಾಜ್, ‘ಈ ಚಿತ್ರದಲ್ಲಿ ನಾನು ಮಫ್ತಿಯಲ್ಲಿರುವ ಪೊಲೀಸ್ ಫಾತ್ರ ಮಾಡಿದ್ದೇನೆ. ಸಿನಿಮಾದಲ್ಲಿ ಆಕ್ಷನ್ ತುಂಬಾ ವಿಶೇಷವಾಗಿದೆ. ನಿರ್ದೇಶಕ ಪುನೀತ್ ಅವರು ಮಾಡಿಕೊಂಡಿದ್ದ ಕಥೆ ತುಂಬಾ ಚೆನ್ನಾಗಿದೆ’ ಎಂದು ಹೇಳಿದರು.

‘ಅಮರಾವತಿ ಪೊಲೀಸ್ ಸ್ಟೇಷನ್’ ಚಿತ್ರದಲ್ಲಿ ಹಿರಿಯ ನಟಿ ಭವ್ಯ, ಧರ್ಮ, ಸಾಧು ಕೋಕಿಲ, ಕಾಕ್ರೋಚ್ ಸುಧಿ ನಾಗೇಂದ್ರ ಪ್ರಸಾದ್, ಧರ್ಮಣ್ಣ ಕಡೂರು ಮುಂತಾದವರು ನಟಿಸಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರೋಣದ ಬಕ್ಕೇಶ್ ಅವರ ಸಂಗೀತ, ಗೌತಮ್ ಮಟ್ಟಿ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

26 mins ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

48 mins ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

1 hour ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

2 hours ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

2 hours ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

2 hours ago