ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಹಾರೈಸಿದರು.
ಈ ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಕಾಣಗಳಿವೆಯಂತೆ. ಈ ಕುರಿತು ಮಾತನಾಡುವ ನಿರ್ದೇಶಕ ಕಂ ನಾಯಕ ವಿನಯ್ ವಾಸುದೇವ್, ‘ಚಿತ್ರಕ್ಕೆ ‘ದಿ’ ಎಂದು ಹೆಸರಿಡಲು ಮೂರು ಜನ ಮುಖ್ಯ ಕಾರಣ. ಒಂದು ನಟ ಸುದೀಪ್. ಇನ್ನೊಬ್ಬರು ನನ್ನ ಗುರುಗಳು. ನಾನು ಸುದೀಪ್ ಅವರ ಅಭಿಮಾನಿ ಹಾಗೂ ನಮ್ಮ ಗುರುಗಳ ಹೆಸರಿನಲ್ಲೂ ದಿ ಅಕ್ಷರವಿದೆ. ಚಿತ್ರದಲ್ಲೂ ನಾಯಕನ ಹೆಸರು ದೀಪು. ನಮ್ಮ ‘ದಿ’ ಚಿತ್ರದ ನಾಯಕಿ ಹೆಸರು ದಿಶಾ ರಮೇಶ್. ಈ ಎಲ್ಲಾ ಕಾರಣಗಳಿಂದ ನಮ್ಮ ಚಿತ್ರಕ್ಕೆ ‘ದಿ’ ಎಂದು ಶೀರ್ಷಿಕೆ ಇಡಲಾಗಿದೆ. ಹಾಗಾಗಿ ಇದು ಇಂಗ್ಲೀಷ್ ‘The’ ಅಲ್ಲ. ಕನ್ನಡದ ‘ದಿ’ ಎಂದರು.
ಈ ಚಿತ್ರದ ಶೇಕಡ 80% ರಷ್ಟು ಭಾಗದ ಚಿತ್ರೀಕರಣ ಕಾಡಿನಲ್ಲೇ ನಡೆಯುತ್ತದೆಯಂತೆ. ‘ದೇವರಾಯನ ದುರ್ಗ, ದೇವರಮನೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣವಾದ ಸ್ಥಳಗಳ ಹೆಸರಿನಲ್ಲೂ ದ ಅಕ್ಷರವಿದೆ. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದೇನೆ ಜೊತೆಗೆ ನಾಯಕನಾಗೂ ನಟಿಸಿದ್ದೇನೆ. ಚಿತ್ರತಂಡದ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಮೇ.16 ರಂದು ತೆರೆ ಕಾಣಲಿದೆ’ ಎಂದರು.
ಇದನ್ನೂ ಓದಿ:- ತಮಿಳುನಾಡು| ವೇದಿಕೆ ಮೇಲೆಯೇ ಕುಸಿದು ಬಿದ್ದ ತಮಿಳು ನಟ ವಿಶಾಲ್
ನಾಯಕಿ ದಿಶಾ ರಮೇಶ್ ಮಾತನಾಡಿ, ‘ನನಗೆ ವಿನಯ್ ಅವರು ಕಥೆ ಹೇಳಿದಾಗ ಕಥೆ ಕೇಳಿ ಬಹಳ ಇಷ್ಟವಾಯಿತು. ನಂತರ ಟೀಸರ್ ನೋಡಿದ ಮೇಲಂತೂ ಅವರು ಹೇಳಿದಕ್ಕಿಂತ ಇನ್ನೂ ಚೆನ್ನಾಗಿ ಮೂಡಿ ಬಂದಿತ್ತು. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ’ ಎಂದರು.
‘ದಿ’ ಚಿತ್ರದಲ್ಲಿ ಹರಿಣಿ ಶ್ರೀಕಾಂತ್, ನಾಗೇಂದ್ರ ಅರಸ್, ಡಾಲಾ ಶರಣ್, ಕಲಾರತಿ ಮಹಾದೇವ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಲೆನ್ ಭರತ್ ಛಾಯಾಗ್ರಹಣ, ಯು.ಎಂ. ಸ್ಟೀವನ್ ಸತೀಶ್ ಸಂಗೀತವಿದೆ.
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…