ನಟ, ನಿರ್ದೇಶಕ ಅರ್ಜುನ್ ಸರ್ಜಾ ನಿರ್ದೇಶನದ ʼಸೀತಾ ಪಯಣʼ ಸಿನಿಮಾದಲ್ಲಿ ನಟ ಧ್ರುವ ಸರ್ಜಾ ಪವರ್‌ಫುಲ್ ಪಾತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಫಸ್ಟ್‌ಲುಕ್ ರಿವೀಲ್ ಆಗಿದೆ.
ʼಸೀತಾ ಪಯಣʼ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಧ್ರುವ ಸರ್ಜಾ ಕಾಣಿಸಿಕೊಳ್ಳುತ್ತಿದ್ದು, ಪವನ್ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಚಿತ್ರದಲ್ಲಿ ಧ್ರುವ ಅವರು ಜಬರ್‌ದಸ್ತ್ ಆಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಸದ್ಯ ಧ್ರುವ ಅವರ ರೀವಿಲ್ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದು, ಸಿನಿಮಾ ರಿಲೀಸ್‌ಗಾಗಿ ಕಾಯುತ್ತಿದ್ದಾರೆ.
ಇನ್ನೂ ಈ ಸಿನಿಮಾದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿದ್ದು, ನಾಯಕಿಯಾಗಿ ಐಶ್ವರ್ಯಾ ಸರ್ಜಾ ಕಾಣಿಸಿಕೊಳ್ಳಲಿದ್ದಾರೆ.





