ಮನರಂಜನೆ

ನಿಂತು ಹೋಯ್ತಾ ‘ಜಿಮ್ಮಿ’?; ಹೊಸ ಚಿತ್ರದೊಂದಿಗೆ ಬಂದ ಸಂಚಿತ್‍

ಸುದೀಪ್‍ ಅಕ್ಕನ ಮಗ ಸಂಚಿತ್‍ ಸಂಜೀವ್‍ ಎರಡು ವರ್ಷಗಳ ಹಿಂದೆ ‘ಜಿಮ್ಮಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯಾಗಿತ್ತು. ಈ ಚಿತ್ರವನ್ನು ಲಹರಿ ಫಿಲಂಸ್‍ನ ನವೀನ್ ‍ಮನೋಹರನ್‍ ಮತ್ತು ಕೆ.ಪಿ. ಶ್ರೀಕಾಂತ್‍ ನಿರ್ಮಿಸಬೇಕಿತ್ತು. ದೊಡ್ಡ ಮಟ್ಟದಲ್ಲಿ ನಡೆದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಶಿವರಾಜಕುಮಾರ್ ಮುಂತಾದವರು ಬಂದು ಸಂಚಿತ್‍ಗೆ ಶುಭ ಹಾರೈಸಿದ್ದರು. ಆ ನಂತರ ಚಿತ್ರದ ಸುದ್ದಿಯೇ ಇರಲಿಲ್ಲ.

ಇದೀಗ ಸಂಚಿತ್‍ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ‘ಜಿಮ್ಮಿ’ ಚಿತ್ರಕ್ಕೆ ಸಂಚಿತ್ ನಾಯಕನಷ್ಟೇ ಅಲ್ಲ, ನಿರ್ದೇಶನವನ್ನೂ ಮಾಡಬೇಕಿತ್ತು. ಈಗ ಅವರು ಹೊಸ ಚಿತ್ರವೊಂದರಲ್ಲಿ ನಾಯಕನಾಗಿ ನಟಿಸುವುದಕ್ಕೆ ಸಜ್ಜಾಗುತ್ತಿದ್ದು, ಆ ಚಿತ್ರವನ್ನು ವಿವೇಕ್‍ ಎನ್ನುವವರು ನಿರ್ದೇಶನ ಮಾಡುತ್ತಿದ್ದಾರೆ. ಹಾಗಾದರೆ, ‘ಜಿಮ್ಮಿ’ ಚಿತ್ರ ನಿಂತು ಹೋಯ್ತಾ? ಅಥವಾ ಮುಂದಕ್ಕೇನಾದರೂ ಹೋಯ್ತಾ? ಎಂಬ ಪ್ರಶ್ನೆ ಸಹಜ. ಚಿತ್ರ ಘೋಷಣೆಯಾದ ಸಂದರ್ಭದಲ್ಲಿ ಚಿತ್ರಕ್ಕೆ ಒಂದು ಕಥೆಯೇ ಇರಲಿಲ್ಲಲ ಎಂದು ಹೇಳಲಾಗಿದೆ. ಚಿತ್ರತಂಡ ನಾಯಕನನ್ನು ಪರಿಚಯಿಸುವ ಟೀಸರ್ ಬಿಡುಗಡೆ ಮಾಡಿತಾದರೂ, ಸೂಕ್ತ ಕಥೆ ಸಿಗದ ಕಾರಣ ಚಿತ್ರ ನಿಂತಿದೆ ಎಂದು ಹೇಳಲಾಗುತ್ತಿದೆ. ಆದರೆ, ‘ಜಿಮ್ಮಿ’ ಚಿತ್ರತಂಡದಿಂದ ಈ ಕುರಿತು ಯಾವುದೇ ಸ್ಪಷ್ಟನೆ ಇಲ್ಲ.

ಅಂದಹಾಗೆ, ಸಂಚಿತ್‍ ಅಭಿನಯದ ಹೊಸ ಚಿತ್ರದ ಹೆಸರು ಘೋಷಣೆಯಾಗಿಲ್ಲ. ಸುದೀಪ್‍ ಅವರ ಪತ್ನಿ ಮತ್ತು ಮಗಳ ಹೆಸರಲ್ಲಿ ಪ್ರಾರಂಭವಾಗಿರುವ ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು KRG ಪ್ರೊಡಕ್ಷನ್ಸ್ ಬ್ಯಾನರ್‍ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.

ಕಾರ್ತಿಕ್‍ ಗೌಡ ಹೇಳಿಕೊಂಡಿರುವಂಗೆ ಮೈಸೂರು ಮೂಲದ ವಿವೇಕ್‍, ‘ನಿನ್ನಿಂದಲೇ’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿದ್ದರಂತೆ. ಆ ನಂತರ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವಗಳಿಸಿರುವ ವಿವೇಕ್‍, ಇದೀಗ ಹೊಸ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

ಇದು ಕ್ರೈಂ ಥ್ರಿಲ್ಲರ್ ಸ್ಟೋರಿ ಆಗಿದ್ದು, ಈ ಚಿತ್ರದ ಮೊದಲ ನೋಟ ಮತ್ತು ಶೀರ್ಷಿಕೆ ಅನಾವರಣ ಜನವರಿ 24ರಂದು ನಡೆಯಲಿದೆ. ಅಂದೇ ಚಿತ್ರದ ಮುಹೂರ್ತ ಸಹ ನಡೆಯಲಿದೆ. ಇನ್ನು ಈ ಚಿತ್ರದ ನಾಯಕಿ ಯಾರು? ಯಾರೆಲ್ಲಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮತ್ತು ಕೆಲಸ ಮಾಡಲಿದ್ದಾರೆ ಮುಂತಾದಪ್ರಶ್ನೆಗಳಿಗೆ ಮುಹೂರ್ತದ ದಿನವೇ ಉತ್ತರ ಸಿಗಲಿದೆ.

ಭೂಮಿಕಾ

Recent Posts

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

41 seconds ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…

5 mins ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…

11 mins ago

ಓದುಗರ ಪತ್ರ:  ಹೀಲಿಯಂ ಗ್ಯಾಸ್ ಬಲೂನ್ ಮಾರಾಟ ನಿಷೇಧಿಸಿ

ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…

34 mins ago

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…

50 mins ago

ಸೇವಾ ಕೈಂಕರ್ಯದ ಪ್ರತಿರೂಪ ಚೈತನ್ಯ ಚಾರಿಟಬಲ್ ಟ್ರಸ್ಟ್‌

ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…

1 hour ago