ಮನರಂಜನೆ

ನಿರ್ದೇಶಕರಾಗಿ ಬಾಬು 50 ವರ್ಷ: ಅ.23ರಿಂದ ಐದು ದಿನಗಳ ಕಾಲ ‘SVR 50’

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಎಸ್‍.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶಕರಾಗಿ 50 ವರ್ಷಗಳಾಗಿವೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಿತ್ರರಂಗದಿಂದ ‘SVR 50’ ಎಂಬ ಕಾರ್ಯಕ್ರಮ ಆಯೋಜಿಸಿ ರಾಜೇಂದ್ರ ಸಿಂಗ್ ಬಾಬು ಅವರನ್ನು ಆತ್ಮೀಯವಾಗಿ ಸನ್ಮಾನಿಸುವ ಕಾರ್ಯಕ್ರಮ ಸದ್ಯದಲ್ಲೇ ನಡೆಯಲಿದೆ.

ಸಮಾರಂಭದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ನಾಗತಿಹಳ್ಳಿ ಚಂದ್ರಶೇಖರ್, ಪಿ. ಶೇಷಾದ್ರಿ, ನಂಜುಂಡೇಗೌಡ, ವಿಜಯಲಕ್ಷ್ಮಿ ಸಿಂಗ್, ಸಂಗೀತ ನಿರ್ದೇಶಕ ಹಂಸಲೇಖ, ನಿರ್ಮಾಪಕ ರಾಕ್‍ಲೈನ್‍ ವೆಂಕಟೇಶ್, ಪತ್ರಕರ್ತ ಗಂಗಾಧರ್ ಮೊದಲಿಯರ್, ಬಿ.ಎಸ್‍. ಲಿಂಗದೇವರು, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ. ವಿಶ್ವನಾಥ್, ಸಂಕಲನಕಾರ ಕೆಂಪರಾಜ್ ಹಾಗೂ ಸಮಾರಂಭದ ಆಯೋಜಕರಾದ ಕೃಷ್ಣೇಗೌಡ (ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ) ಉಪಸ್ಥಿತರಿದ್ದರು.

ಇದನ್ನು ಓದಿ: ಮುಖ್ಯಮಂತ್ರಿಯಾದ ಎಲ್‍.ಆರ್.ಶಿವರಾಮೇಗೌಡ; ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ನಟನೆ

ಕಾರ್ಯಕ್ರಮದ ರೂಪುರೇಷೆಗಳ ಕುರಿತಾಗಿ ಮಾತನಾಡಿದ ಕೃಷ್ಣೇಗೌಡ, ‘ಕರ್ನಾಟಕ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ 50 ವರ್ಷಗಳ ಸಕ್ರಿಯವಾಗಿ ನಿರ್ದೇಶಕರಾಗಿರುವವರು ಯಾರು ಇಲ್ಲ. ಆ ಹೆಗ್ಗಳಿಕೆ ಮತ್ತು ಖ್ಯಾತಿ ಬಾಬು ಅವರಿಗಿದೆ.. ಈಗಲೂ ಅವರ ನಿರ್ದೇಶನದ ಎರಡು ಚಿತ್ರಗಳು ತೆರೆಗೆ ಬರಲು ಸಿದ್ದಾವಾಗಿದೆ. ಈ ಸುವರ್ಣ ಸಂಭ್ರಮವನ್ನು ಸಂಭ್ರಮಿಸಲು ಅಕ್ಟೋಬರ್ 23 ರಿಂದ 5 ದಿನಗಳ ಕಾಲ ‘SVR 50ʼ ಎಂಬ ಸಮಾರಂಭ ನಡೆಸಲು ಉದ್ದೇಶಿಸಲಾಗಿದೆ’ ಎಂದರು.

ಅಕ್ಟೋಬರ್.23ರಂದು ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಅಲ್ಲಿಂದ ನಾಲ್ಕು ದಿನಗಳ ಕಾಲ ಕಲಾವಿದರ ಸಂಘದಲ್ಲಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಚಿತ್ರಗಳ ಚಿತ್ರೋತ್ಸವ ನಡೆಯಲಿದೆ. ದಿನಕ್ಕೆ ಎರಡು ಚಿತ್ರಗಳ ಪ್ರದರ್ಶನವಿರುತ್ತದೆ. ಈ ಸಂದರ್ಭದಲ್ಲಿ ಕನ್ನಡ ಹಾಗೂ ಇತರ ಭಾಷೆಗಳ ಗಣ್ಯರು ಪಾಲ್ಗೊಳ್ಳಲಿದ್ದಾರೆ. 27 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ರಾಜೇಂದ್ರಸಿಂಗ್ ಬಾಬು ಅವರಿಗೆ ಚಿತ್ರರಂಗದ ಪರವಾಗಿ ಆತ್ಮೀಯವಾಗಿ ಸನ್ಮಾನ‌ ಸಮಾರಂಭ ನಡೆಯಲಿದೆ. ಅಂದು ಬಾಬು ಕುರಿತು ಎರಡು ಪುಸ್ತಕಗಳು ಮತ್ತು ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಹಂಸಲೇಖ ಅವರ ನೇತೃತ್ವದಲ್ಲಿ ರಾಜೇಂದ್ರಸಿಂಗ್ ಬಾಬು ಅವರ ನಿರ್ದೇಶನದ ಚಿತ್ರಗಳ ಜನಪ್ರಿಯ ಹಾಡುಗಳನ್ನು ಹಂಸಲೇಖ ಅವರ ತಂಡದವರು ಹಾಡಲಿದ್ದಾರೆ. ಮುಖ್ಯಮಂತ್ರಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಹಿರಿಯ ನಿರ್ದೇಶಕ ಗಿರೀಶ್‍ ಕಾಸರವಳ್ಳಿ ಮಾತನಾಡಿ, ‘ರಾಜೇಂದ್ರಸಿಂಗ್ ಬಾಬು ಅವರು ಸಿನಿಮಾ ನಿರ್ದೇಶನವನ್ನು ಹೊರತುಪಡಿಸಿ, ಚಿತ್ರರಂಗಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಸ್ಥಾಪನೆ, ವಿಧಾನಸೌಧದ ಮುಂದೆ ಚಲನಚಿತ್ರೋತ್ಸವದ ಉದ್ಘಾಟನೆ ಹಾಗೂ ಮೈಸೂರಿನ ಅರಮನೆ ಬಳಿ ಸಮರೋಪ ಸಮಾರಂಭದ ಆಯೋಜನೆ ಹೀಗೆ ಹಲವು ಕಾರ್ಯಕ್ರಮಗಳನ್ನು ಬಾಬು ಅವರು ಮಾಡಿದ್ದಾರೆ. ತಮ್ಮ ಚಿತ್ರಗಳ ಮೂಲಕವೂ ಅವರು ಎಲ್ಲರ ಮನೆ ಮಾತಾಗಿದ್ದಾರೆ. ರಾಜೇಂದ್ರ ಸಿಂಗ್ ಬಾಬು ಅವರು ನಿರ್ದೇಶಕರಾಗಿ 50 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸುತ್ತೇನೆ’ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

19 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago