ಮನರಂಜನೆ

ಜುಲೈನಲ್ಲಿ ಬಿಡುಗಡೆ ಆಗಲಿದೆ ದೀಕ್ಷಿತ್‍ ಶೆಟ್ಟಿ ಅಭಿನಯದ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’

ದೀಕ್ಷಿತ್‍ ಶೆಟ್ಟಿ ಅಭಿನಯದ ‘ಬ್ಲಿಂಕ್‍’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ ದೀಕ್ಷಿತ್, ಈ ಮಧ್ಯೆ ಸದ್ದಿಲ್ಲದೆ ಒಂದು ಚಿತ್ರವನ್ನು ಮುಗಿಸಿದ್ದಾರೆ. ಅದೇ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’.

ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಸಿದ್ಧವಾಗಿರುವ ಈ ಚಿತ್ರ ಬಿಡುಗಡೆಯಾಗುವುದಕ್ಕೆ ಸಿದ್ಧವಾಗಿದ್ದು, ಜುಲೈನಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ‘ಹರಿ ಓಂ’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’ ಚಿತ್ರದ ಮೊದಲ ಹಾಡನ್ನು ಲಹರಿ ಸಂಸ್ಥೆಯ MRT ಮ್ಯೂಸಿಕ್ ಮೂಲಕ ಬಿಡುಗಡೆ ಮಾಡಲಾಗಿದೆ.

ನಾಗಾರ್ಜುನ ಶರ್ಮ ಬರೆದಿರುವ ‘ಹರ ಓಂ’ ಎಂಬ ಶಿವನ ಕುರಿತಾದ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ಹಾಡು ಸಹ ಎರಡೂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ. ಕನ್ನಡದಲ್ಲಿ ಶಿಲ್ಪ ಹಾಗೂ ತೆಲುಗಿನಲ್ಲಿ ಖ್ಯಾತ ಗಾಯಕಿ ಮಂಗ್ಲಿ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿದ್ದಾರೆ. ಉಷಾ ಭಂಡಾರಿ ಹಾಗೂ ದರ್ಶನ್ ನೃತ್ಯ ಸಂಯೋಜನೆ ಮಾಡಿದ್ದಾರೆ.

‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಎಚ್.ಕೆ. ಪ್ರಕಾಶ್ ನಿರ್ಮಿಸಿರುವ ಈ ಚಿತ್ರವನ್ನು ಅಭಿಷೇಕ್‍ ಎಂ ನಿರ್ದೇಶನ ಮಾಡಿದ್ದಾರೆ. ಅಭಿಷೇಕ್‍ ಇದಕ್ಕೂ ಮೊದಲು ‘ಸಿಂಪಲ್’ ಸುನಿ ಅವರ ಜೊತೆಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದವರು. ಜೊತೆಗೆ ರಕ್ಷಿತ್ ಶೆಟ್ಟಿ ಹಾಗೂ ಸಚಿನ್ ಶೆಟ್ಟಿ ಸೇರಿ ಪಿನಾಕ ಎಂಬ VFX ಸ್ಟುಡಿಯೋ ಸಹ ನಡೆಸುತ್ತಿದ್ದಾರೆ. ಈಗ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮೀ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಅವರು, ‘ನಿರ್ಮಾಪಕ ಪ್ರಕಾಶ್ ಅವರು ‘ಅವನ್ನೇ ಶ್ರೀಮನ್ನಾರಾಯಣ’ ಚಿತ್ರದ ಸಮಯದಿಂದಲೂ ಪರಿಚಯ. ಈ ಚಿತ್ರದ ಕಥೆ ಕೇಳಿದ ಅವರು ನಿರ್ಮಾಣಕ್ಕೆ ಮುಂದಾದರು. ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಚಿತ್ರದ ಪ್ರೀ ಕ್ಲೈಮ್ಯಾಕ್ಸ್ ನಲ್ಲಿ ಈ ಹಾಡು ಬರುತ್ತದೆ. ಚಿತ್ರದ ಕಥೆಗೆ ಹಾಗೂ ಈ ಹಾಡಿಗೂ ಸಂಬಂಧವಿದೆ’ ಎಂದರು.

ದೀಕ್ಷಿತ್‍ ಶೆಟ್ಟಿ ಮಾತನಾಡಿ, ‘ಕಳೆದ ವರ್ಷ ಇದೇ ಸಮಯಕ್ಕೆ ನನ್ನ ‘ಬ್ಲಿಂಕ್’ ಚಿತ್ರ ಬಿಡುಗಡೆಯಾಗಿತ್ತು. ಇಂದು ಬಿಡುಗಡೆಯಾಗಿರುವ ಈ ಚಿತ್ರದ ಹಾಡು ತುಂಬಾ ಚೆನ್ನಾಗಿದೆ. ವಿಶೇಷವೆಂದರೆ ಈ ಹಾಡಿನಲ್ಲಿ ನನ್ನ ಗುರುಗಳು ಹಾಗೂ ನಾನು ಪಾಠ ಹೇಳಿ ಕೊಟ್ಟಿರುವ ಹುಡುಗರು ಅಭಿನಯಿಸಿದ್ದಾರೆ’ ಎಂದರು.

‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದಲ್ಲಿ ದೀಕ್ಷಿತ್‍ಗೆ ನಾಯಕಿಯಾಗಿ ಬೃಂದಾ ಆಚಾರ್ಯ ನಟಿಸಿದ್ದು, ಉಷಾ ಭಂಡಾರಿ, ಗೋಪಾಲಕೃಷ್ಣ ದೇಶಪಾಂಡೆ, ಶ್ರೀವತ್ಸ, ಅಶ್ವಿನ್‍ ರಾವ್ ಪಲ್ಲಕ್ಕಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ ಸಂಗೀತ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗಮಧ್ಯೆ ಎರಡು ಚಿರತೆಗಳು ಪ್ರತ್ಯಕ್ಷ: ಆತಂಕದಲ್ಲಿ ವಾಹನ ಸವಾರರು

ಮಹಾದೇಶ್‌ ಎಂ ಗೌಡ  ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…

29 mins ago

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

3 hours ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

3 hours ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

3 hours ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

4 hours ago