ಮನರಂಜನೆ

ಡಿಕೆಶಿ ಹೇಳಿಕೆಯಿಂದ ದರ್ಶನ್‌ಗೆ ಮತ್ತೊಂದು ಸಂಕಷ್ಟ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಲಿದೆಯಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ ಸದ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೀಡಿರುವ ಹೇಳಿಕೆ.

ಇಂದು ( ಜೂನ್‌ 18 ) ಡಿಕೆ ಶಿವಕುಮಾರ್‌ ಬಿಬಿಎಂಪಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆಗಳ ಕಚೇರಿ ಉದ್ಘಾಟನೆ ಮತ್ತು ಬಿಬಿಎಂಪಿ ಪೌರ ಸಭಾಂಗಣ ಕಚೇರಿ ಉದ್ಘಾಟನೆ ಮಾಡಿ ಮಾಧ್ಯಮಗಳ ಜತೆ ಮಾತನಾಡುವಾಗ ರಾಜರಾಜೇಶ್ವರಿ ನಗರ ರಾಜಕಾಲುವೆ ಮೇಲೆ ನಿರ್ಮಾಣಗೊಂಡಿರುವ ದರ್ಶನ್‌ ಮನೆ ತೆರವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಕ್ರಮವಹಿಸಿ ತೆರವು ಮಾಡಲಿದ್ದೇವೆ. ನೀನು ಸ್ಟೇ ತಂದಿದ್ದರೂ ತೆರವು ಮಾಡುತ್ತೇವೆ. ನಾನು ಸ್ಟೇ ತಂದಿದ್ದರೂ ತೆರವು ಮಾಡುತ್ತೇವೆ. ಯಾರೇ ಸ್ಟೇ ತಂದಿದ್ದರೂ ತೆರವು ಮಾಡುತ್ತೇವೆ. ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್‌ ಹೇಳಿದರು. ಈ ಮೂಲಕ ಪರೋಕ್ಷವಾಗಿ ದರ್ಶನ್‌ ಮನೆ ತೆರವಿನ ಸುಳಿವು ನೀಡಿದಂತಿದೆ.

ಈ ಹಿಂದೆ ಸರ್ಕಾರ ರಾಜಕಾಲುವೆ ಮೇಲೆ ನಿರ್ಮಾಣವಾಗಿರುವ ಮನೆಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದಾಗ ನಟ ದರ್ಶನ್‌ ಬಫರ್‌ ಜೋನ್‌ ಮೇಲೆ ಮನೆ ನಿರ್ಮಿಸಿರುವುದು ಬೆಳಕಿಗೆ ಬಂದಿತ್ತು. ಕೂಡಲೇ ದರ್ಶನ್‌ ಕೋರ್ಟ್ ಮೊರೆ ಹೋಗಿದ್ದರು. ಉಚ್ಛ ನ್ಯಾಯಾಲಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ 2016ರಲ್ಲಿ ಸೂಚನೆ ನೀಡಿತ್ತು.

 

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

14 mins ago

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…

32 mins ago

ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು ; 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…

1 hour ago

ಹೊಗೇನಕಲ್‌ : ನೀರಿನ ಸೆಳೆತಕ್ಕೆ ಸಿಲುಕಿ ಓರ್ವ ಸಾವು

ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…

1 hour ago

ರಾಜ್ಯಸಭಾ ಸದಸ್ಯರಾಗಿ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ…

2 hours ago

ನಾಪತ್ತೆಯಾಗಿದ್ದ ಕೇರಳದ ವಿದ್ಯಾರ್ಥಿನಿ ಶವವಾಗಿ ಪತ್ತೆ

ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ…

2 hours ago