ಮೈಸೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ “ಮೈಸೂರಿನ ಅನ್ವೇಷಿಸದ ಪ್ರವಾಸಿ ತಾಣಗಳು” ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯ ಮಟ್ಟದ ಛಾಯಾಚಿತ್ರ ಮತ್ತು ಕಿರು ವಿಡಿಯೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನದಿಗಳು, ಪ್ರಕೃತಿ ಮತ್ತು ರಮಣೀಯ ಸೌಂದರ್ಯ ತಾಣಗಳು, ಜಲಪಾತಗಳು, ವಸ್ತು ಸಂಗ್ರಹಾಲಯಗಳು, ಜಾನಪದ ಹಾಗೂ ಕಲೆಗಳು, ಸಾಂಪ್ರದಾಯಿಕ ಸ್ಥಳೀಯ ಹಬ್ಬಗಳು ಮತ್ತು ಕಲೆಗಳು, ಪಾರಂಪರಿಕ ಕಟ್ಟಡಗಳು ಮತ್ತು ಸ್ಮಾರಕಗಳು, ಧಾರ್ಮಿಕ ಮತ್ತು ಸಾಹಸ ಪ್ರವಾಸೋದ್ಯಮ ಹಾಗೂ ಇತರೆ ತಾಣಗಳ ರಾಜ್ಯ ಮಟ್ಟದ ಛಾಯಾಗ್ರಹಣ ಮತ್ತು ಕಿರು ವೀಡಿಯೋ ಸ್ಪರ್ಧೆ ಇದಾಗಿದೆ.
ಆಯ್ಕೆಯಾದ ಅತ್ಯುತ್ತಮ ಸ್ಪರ್ಧಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ ರೂ.25,000 ದ್ವಿತೀಯ ಬಹುಮಾನ ರೂ.15,000 ಹಾಗೂ ತೃತೀಯ ಬಹುಮಾನವಾಗಿ ರೂ.10,000 ಗಳನ್ನು ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು https://Mysore.nic.inen/competitions/ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಜೂ.20 ಅಂತಿಮ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ visitmysurutourism@gmail.com ಹಾಗೂ 7411564510, 9008693409 ನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಭಾಗದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಕೆ. ಸವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…