ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ‘ನಾಯಿ ಇದೆ ಎಚ್ಚರಿಕೆ’. ಈಗ ಇದೇ ಚಿತ್ರವೊಂದರ ಶೀರ್ಷಿಕೆಯಾಗಿದೆ. ಈ ಚಿತ್ರವನ್ನು ಡಾ.ಲೀಲಾ ಮೋಹನ್ ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕಲಿ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದ್ರಜಿತ್ ಲಂಕೇಶ್ ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಪ್ರಥಮ್ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.
ಡಾ.ಲೀಲಾ ಮೋಹನ್ ಇದಕ್ಕೂ ಮೊದಲು ‘ಗಡಿಯಾರ’, ‘ಪುಟ್ಟಾಣಿ ಪಂಟರುಗಳು’, ‘ರೋಡ್ ಕಿಂಗ್’ ಮುಂತಾದ ಚಿತ್ರಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡುವ ಅವರು, ‘ನಾನು ವೃತ್ತಿಯಲ್ಲಿ ವೈದ್ಯ. ಈ ಚಿತ್ರದಲ್ಲೂ ವೈದ್ಯ. ಇದರಲ್ಲೂ ನನ್ನ ಹೆಸರು ಲೀಲಾ ಅಂತಲೇ. ಇನ್ನೂ ಇದು ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕುರಿತಾದ ಸಿನಿಮಾ. ಜೊತೆಗೆ ನಾಯಿ ಕಚ್ಚುವುದರಿಂದ ಆಗುವ ದುಷ್ಪರಿಣಾಮಗಳನ್ನು ತೋರಿಸಿರುವ ಸಿನಿಮಾ. ಇದರ ಜೊತೆಗೆ ಸಸ್ಪೆನ್ಸ್, ಥ್ರಿಲ್ಲರ್, ಹಾರಾರ್, ಸೆಂಟಿಮೆಂಟ್ ಎಲ್ಲಾ ಅಂಶಗಳೂ ಚಿತ್ರದಲ್ಲಿವೆ. ಈ ಚಿತ್ರವನ್ನು ಮುಂದಿನ ತಿಂಗಳು ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.
ನಿರ್ದೇಶಕ ಕಲಿ ಗೌಡ ಕಳೆದ 15 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರಂತೆ. ಈ ಹಿಂದೆ ‘ತನಿಖೆ’ ಎಂಬ ಚಿತ್ರ ನಿರ್ದೇಶಿಸಿದ್ದ ಅವರಿಗೆ ನಿರ್ದೇಶಕನಾಗಿ ಇದು ಎರಡನೇ ಚಿತ್ರ. ‘ನಾಯಿ ನಿಯತ್ತಿನ ಪ್ರಾಣಿ ಎಂದು ಎಲ್ಲರಿಗೂ ಗೊತ್ತು. ಅದು ಬದುಕಿದಾಗಷ್ಟೇ ಅಲ್ಲ. ಸತ್ತ ಮೇಲೂ ಅದರ ನಿಯತ್ತು ಕಡಿಮೆ ಆಗಲ್ಲ ಎಂಬದನ್ನು ನಮ್ಮ ಚಿತ್ರದ ಮೂಲಕ ತೋರಿಸಿದ್ದೇವೆ’ ಎಂದರು.
‘ನಾಯಿ ಇದೆ ಎಚ್ಚರಿಕೆ’ ಚಿತ್ರದಲ್ಲಿ ಡಾ. ಲೀಲಾ ಮೋಹನ್ ಅವರಿಗೆ ದಿವ್ಯಶ್ರೀ ನಾಯಕಿಯಾಗಿ ನಟಿಸಿದ್ದು, ಮಿಕ್ಕಂತೆ ಪ್ರಮೋದ್ ಶೆಟ್ಟಿ, ಬಲಾ ರಾಜ್ವಾಡಿ, ದಿನೇಶ್ ಮಂಗಳೂರು, ನಾಗೇಂದ್ರ ಅರಸ್, ಮಾನಸ, ಚಂದನ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಮ್ಯಾಡ್ ಡಿ ಸಂಗೀತ ಸಂಯೋಜಿಸಿದ್ದಾರೆ.
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…