ಮನರಂಜನೆ

ನಾಯಿ, ರೇಬಿಸ್‍ ಮತ್ತು ಎಚ್ಚರಿಕೆ; ವೈದ್ಯರ ಸಿನಿ ಪಯಣ

ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ‘ನಾಯಿ ಇದೆ ಎಚ್ಚರಿಕೆ’. ಈಗ ಇದೇ ಚಿತ್ರವೊಂದರ ಶೀರ್ಷಿಕೆಯಾಗಿದೆ. ಈ ಚಿತ್ರವನ್ನು ಡಾ.ಲೀಲಾ ಮೋಹನ್‍ ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿದರೆ, ಕಲಿ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದ್ರಜಿತ್‍ ಲಂಕೇಶ್‍ ಇತ್ತೀಚೆಗೆ ಈ ಚಿತ್ರದ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಪ್ರಥಮ್‍ ಸಹ ಈ ಸಂದರ್ಭದಲ್ಲಿ ಹಾಜರಿದ್ದರು.

ಡಾ.ಲೀಲಾ ಮೋಹನ್‍ ಇದಕ್ಕೂ ಮೊದಲು ‘ಗಡಿಯಾರ’, ‘ಪುಟ್ಟಾಣಿ ಪಂಟರುಗಳು’, ‘ರೋಡ್ ಕಿಂಗ್’ ಮುಂತಾದ ಚಿತ್ರಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಕುರಿತು ಮಾತನಾಡುವ ಅವರು, ‘ನಾನು ವೃತ್ತಿಯಲ್ಲಿ ವೈದ್ಯ. ಈ ಚಿತ್ರದಲ್ಲೂ ವೈದ್ಯ. ಇದರಲ್ಲೂ ನನ್ನ ಹೆಸರು ಲೀಲಾ ಅಂತಲೇ. ಇನ್ನೂ ಇದು ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕುರಿತಾದ ಸಿನಿಮಾ. ಜೊತೆಗೆ ನಾಯಿ ಕಚ್ಚುವುದರಿಂದ ಆಗುವ ದುಷ್ಪರಿಣಾಮಗಳನ್ನು ತೋರಿಸಿರುವ ಸಿನಿಮಾ. ಇದರ ಜೊತೆಗೆ ಸಸ್ಪೆನ್ಸ್, ಥ್ರಿಲ್ಲರ್, ಹಾರಾರ್, ಸೆಂಟಿಮೆಂಟ್ ಎಲ್ಲಾ ಅಂಶಗಳೂ ಚಿತ್ರದಲ್ಲಿವೆ. ಈ ಚಿತ್ರವನ್ನು ಮುಂದಿನ ತಿಂಗಳು ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.

ನಿರ್ದೇಶಕ ಕಲಿ ಗೌಡ ಕಳೆದ 15 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರಂತೆ. ಈ ಹಿಂದೆ ‘ತನಿಖೆ’ ಎಂಬ ಚಿತ್ರ ನಿರ್ದೇಶಿಸಿದ್ದ ಅವರಿಗೆ ನಿರ್ದೇಶಕನಾಗಿ ಇದು ಎರಡನೇ ಚಿತ್ರ. ‘ನಾಯಿ ನಿಯತ್ತಿನ ಪ್ರಾಣಿ ಎಂದು ಎಲ್ಲರಿಗೂ ಗೊತ್ತು. ಅದು ಬದುಕಿದಾಗಷ್ಟೇ ಅಲ್ಲ. ಸತ್ತ ಮೇಲೂ ಅದರ ನಿಯತ್ತು ಕಡಿಮೆ ಆಗಲ್ಲ ಎಂಬದನ್ನು ನಮ್ಮ ಚಿತ್ರದ ಮೂಲಕ ತೋರಿಸಿದ್ದೇವೆ’ ಎಂದರು.

‘ನಾಯಿ ಇದೆ ಎಚ್ಚರಿಕೆ’ ಚಿತ್ರದಲ್ಲಿ ಡಾ. ಲೀಲಾ ಮೋಹನ್‍ ಅವರಿಗೆ ದಿವ್ಯಶ್ರೀ ನಾಯಕಿಯಾಗಿ ನಟಿಸಿದ್ದು, ಮಿಕ್ಕಂತೆ ಪ್ರಮೋದ್ ಶೆಟ್ಟಿ, ಬಲಾ ರಾಜ್ವಾಡಿ, ದಿನೇಶ್ ಮಂಗಳೂರು, ನಾಗೇಂದ್ರ ಅರಸ್, ಮಾನಸ, ಚಂದನ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಮ್ಯಾಡ್‍ ಡಿ ಸಂಗೀತ ಸಂಯೋಜಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

9 mins ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

16 mins ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

21 mins ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

25 mins ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

30 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

2 hours ago