Mysore
22
scattered clouds

Social Media

ಶುಕ್ರವಾರ, 14 ಮಾರ್ಚ್ 2025
Light
Dark

ಮಾಜಿ ಸಂಸದ ಪ್ರತಾಪ್‌ ಸಿಂಹಗೆ ಮದುವೆ ಅಮಂತ್ರಣ ನೀಡಿದ ಡಾಲಿ ಧನಂಜಯ್‌

ಮೈಸೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಮಾಜಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ನೀಡಿ ತಮ್ಮ ಮದುವೆಗೆ ಆಹ್ವಾನಿಸಿದ್ದಾರೆ.

ನಟ ಧನಂಜಯ್‌ ಅವರು 2025ರ ಫೆಬ್ರವರಿ 16 ರಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಅದ್ದೂರಿಯಾಗಿ ಡಾಕ್ಟರ್‌ ಧನ್ಯತಾ ಅವರೊಂದಿಗೆ ವಿವಾಹವಾಗುತ್ತಿದ್ದಾರೆ. ಈ
ಹಿನ್ನೆಲೆಯಲ್ಲಿ ಇಂದು(ಜನವರಿ.19) ಮಾಜಿ ಸಂಸದ ಪ್ರತಾಪ್‌ ಸಿಂಹ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬ ಸಮೇತ ಮದುವೆಗೆ ಬರಬೇಕೆಂದು ಆಹ್ವಾನಿಸಿದ್ದಾರೆ.

ಈ ಕುರಿತು ಪ್ರತಾಪ್‌ ಸಿಂಹ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿ, ಕನ್ನಡ ಚಿತ್ರರಂಗದ ಪ್ರತಿಭಾವಂತ ಕಲಾವಿದ ಧನಂಜಯ್ ಅವರು ಇಂದು ಭೇಟಿಯಾಗಿ ತಮ್ಮ ವಿವಾಹ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಇದೇ ವೇಳೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಡಾಲಿ ಅವರಿಗೆ ಶುಭ ಹಾರೈಸಲಾಯಿತು ಎಂದು ತಿಳಿಸಿದ್ದಾರೆ.

Tags: