ಮೈಸೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ನೀಡಿ ತಮ್ಮ ಮದುವೆಗೆ ಆಹ್ವಾನಿಸಿದ್ದಾರೆ.
ನಟ ಧನಂಜಯ್ ಅವರು 2025ರ ಫೆಬ್ರವರಿ 16 ರಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಅದ್ದೂರಿಯಾಗಿ ಡಾಕ್ಟರ್ ಧನ್ಯತಾ ಅವರೊಂದಿಗೆ ವಿವಾಹವಾಗುತ್ತಿದ್ದಾರೆ. ಈ
ಹಿನ್ನೆಲೆಯಲ್ಲಿ ಇಂದು(ಜನವರಿ.19) ಮಾಜಿ ಸಂಸದ ಪ್ರತಾಪ್ ಸಿಂಹ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬ ಸಮೇತ ಮದುವೆಗೆ ಬರಬೇಕೆಂದು ಆಹ್ವಾನಿಸಿದ್ದಾರೆ.
ಈ ಕುರಿತು ಪ್ರತಾಪ್ ಸಿಂಹ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಕನ್ನಡ ಚಿತ್ರರಂಗದ ಪ್ರತಿಭಾವಂತ ಕಲಾವಿದ ಧನಂಜಯ್ ಅವರು ಇಂದು ಭೇಟಿಯಾಗಿ ತಮ್ಮ ವಿವಾಹ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಇದೇ ವೇಳೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಡಾಲಿ ಅವರಿಗೆ ಶುಭ ಹಾರೈಸಲಾಯಿತು ಎಂದು ತಿಳಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…