ಹಾಸನ/ಅರಸೀಕೆರೆ: ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ಸಮಾಜಮುಖಿ ಮಾದರಿಯ ತೃಪ್ತಿಕರ ಕಾಯಕ ಸೇವೆ ಮಾಡುತ್ತಿದ್ದು, ತನ್ನೂರಿನ ಶಾಲೆಗೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿದ್ದಾರೆ.
ನಟ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ಅವರ ವಿವಾಹ ಫೆಬ್ರವರಿಯಲ್ಲಿ ನಡೆಯಲಿದ್ದು, ಈಗಾಗಲೇ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಕರೆಯತೊಡಗಿದ್ದಾರೆ. ಆದರೆ ಈ ಮಧ್ಯೆ ತಮ್ಮ ಹುಟ್ಟೂರು ಅರಸೀಕೆರೆ ತಾಲೂಕಿನ ಕಾಳೇನಹಳ್ಳಿಯ 1 ರಿಂದ 7ನೇ ತರಗತಿವರೆಗಿನ ಸರ್ಕಾರಿ ಶಾಲೆ ಶಿಥಿಲಗೊಂಡಿದ್ದನ್ನು ಗಮನಿಸಿ, ಈ ಶಾಲೆಯ ಅಭಿವೃದ್ಧಿಗಾಗಿ ಆರ್ಥಿಕ ನೆರವು ನೀಡಿದ್ದಾರೆ. ಅಲ್ಲದೇ ತವರೂರಿನ ಮೇಲಿನ ಅಭಿಮಾನದಿಂದ ಶಾಲೆಗೆ ಕಾಯಕ ನೀಡಲು ಮುಂದಾಗಿದ್ದಾರೆ.
ಈ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ 80 ಮಕ್ಕಳು ಕಲಿಯುತ್ತಿದ್ದಾರೆ. ಶಾಲೆಯ ಕೊಠಡಿಗಳಿಗೆ ಟೈಲ್ಸ್, ಗೋಡೆಗಳಿಗೆ ಸುಣ್ಣಬಣ್ಣ, ಚುರಕಿ ಗಾರೆ ರಿಪೇರಿ, ಗೇಟ್ ದುರಸ್ತಿ, ಶಿಕ್ಷಕರ ಕೊಠಡಿ, ಶೌಚಾಲಯ ದುರಸ್ತಿ, ಅಡುಗೆ ಮನೆ ಸಹಿತ ಶಾಲೆಗೆ ಹೈಟೆಕ್ ಸ್ಪರ್ಶ ನೀಡಲು ಧನಂಜಯ್ ದೇಣಿಗೆ ನೀಡಿದ್ದಾರೆ.
ಇನ್ನು ತಮ್ಮ ಮದುವೆಯನ್ನು ಅರ್ಥಪೂರ್ಣಗೊಳಿಸಲು ಇಡೀ ಶಾಲೆಗೆ ಕಾಯಕಲ್ಪ ನೀಡುವ ಮೂಲಕ ಸರ್ಕಾರಿ ಶಾಲೆ ಉಳಿಸಲು ಮುಂದಾಗಿದ್ದಾರೆ. ತನ್ನೂರಿನ ಶಾಲೆಯ ನೆಲಕ್ಕೆ ಟೈಲ್ಸ್, ಬಣ್ಣ ಮಾಸಿದ ಶಾಲೆಯ ಎಲ್ಲ ಗೋಡೆಗಳಿಗೆ ಸಂಪೂರ್ಣ, ಬಿರುಕು ಬಿಟ್ಟಿದ್ದ ಗೋಡೆ, ಅಂತಸ್ತಿಗೆ ಚುರಕಿ, ಗೇಟ್ ದುರಸ್ತಿ, ಶಿಕ್ಷಕರ ಕೊಠಡಿಗೆ ಹೊಸ ರೂಪ, ಶೌಚಾಲಯ ಸುಸ್ಥಿತಿ ಹಾಗೂ ಅಚ್ಚುಕಟ್ಟು ಅಡುಗೆ ಮನೆಗೆ ಹೈಟೆಕ್ ಸ್ಪರ್ಶ ನೀಡುತ್ತಿದ್ದಾರೆ.
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…