ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ ಮದುವೆಗೆ ಆಹ್ವಾನ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡದ ಪ್ರತಿಭಾವಂತ ನಟ ಡಾಲಿ ಧನಂಜಯ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ತಮ್ಮ ವಿವಾಹದ ಅಮಂತ್ರಣ ಪತ್ರಿಕೆಯನ್ನು ನೀಡಿದ್ದಾರೆ. ಅವರು ತಮ್ಮ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ ಅವರಿಗೆ ಶುಭವಾಗಲಿ ಎಂದು ಹಾರೈಸಿದೆ ಎಂದು ತಿಳಿಸಿದ್ದಾರೆ.
ಡಾಲಿ ಧನಂಜಯ್ ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರರಂಗ ಪ್ರವೇಶಿಸಿರುವ ಅವರು ಅಲ್ಲೂ ಕೂಡ ತಮ್ಮ ಛಾಪು ಮೂಡಿಸಿದ್ದಾರೆ. ಅಲ್ಲದೇ ಕನ್ನಡದ ಪ್ರತಿಭಾನ್ವಿತ ನಟರಾಗಿ ಇಷ್ಟು ಎತ್ತರಕ್ಕೆ ಬೆಳೆಯುತ್ತಿರುವುದೇ ಖುಷಿಯ ವಿಷಯ ಎಂದು ಹೇಳಿದ್ದಾರೆ.
ನಟ ಡಾಲಿ ಧನಂಜಯ್ ಹಾಗೂ ಡಾ.ಧನ್ಯತಾ ಅವರು 2025ರ ಫೆಬ್ರವರಿ 16 ಮತ್ತು 17 ರಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಅದ್ದೂರಿಯಾಗಿ ವಿವಾಹವಾಗಲಿದ್ದಾರೆ. ಹೀಗಾಗಿ ಡಾಲಿ ಧನಂಜಯ್ ರಾಜಕೀಯ ಮತ್ತು ಸಿನಿಮಾ ಸೇರಿದಂತೆ ಇನ್ನಿತರ ಗಣ್ಯರಿಗೆ ತಮ್ಮ ಮದುವೆ ಆಮಂತ್ರಣವನ್ನು ನೀಡುತ್ತಿದ್ದಾರೆ.