ಬೆಂಗಳೂರು: ಸ್ಯಾಂಡಲ್‌ವುಡ್ ಡಾಲಿ ಧನಂಜಯ್ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನೀಡಿದ್ದಾರೆ.
ನಟ ಧನಂಜಯ್ ಅವರು 2025ರ ಫೆಬ್ರವರಿ 16 ರಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಅದ್ದೂರಿಯಾಗಿ ಡಾಕ್ಟರ್ ಧನ್ಯತಾ ಅವರೊಂದಿಗೆ ವಿವಾಹವಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು (ಡಿ.30) ಬಿ.ವೈ.ವಿಜಯೇಂದ್ರ ಅವರ ನಿವಾಸಕ್ಕೆ ತೆರಳಿ ಮದುವೆ ಆಮಂತ್ರಣ ನೀಡಿ ಮದುವೆಗೆ ಆಗಮಿಸುವಂತೆ ಆಹ್ವಾನಿಸಿದ್ದಾರೆ.
ಈ ಕುರಿತು ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಕನ್ನಡ ಚಿತ್ರರಂಗದ ಪ್ರತಿಭಾವಂತ ಕಲಾವಿದ ಧನಂಜಯ್ ಅವರು ಇಂದು ಭೇಟಿಯಾಗಿ ತಮ್ಮ ವಿವಾಹ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಡಾಲಿ ಅವರಿಗೆ ಶುಭ ಹಾರೈಸಿ ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರರಂಗ ಪ್ರವೇಶಿಸಿರುವ ಅವರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಶುಭ ಹಾರೈಸಲಾಯಿತು ಎಂದು ತಿಳಿಸಿದ್ದಾರೆ.





