ಮನರಂಜನೆ

ಡಾಲಿ ಈಗ ‘ಜಿಂಗೋ’; ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಘೋಷಣೆ

ಧನಂಜಯ್‍ ಸದ್ಯ ‘ಉತ್ತರಕಾಂಡ’ ಮತ್ತು ‘ಅಣ್ಣ ಫ್ರಮ್‍ ಮೆಕ್ಸಿಕೋ’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದಲ್ಲದೆ ಧನಂಜಯ್‍ ಅಭಿನಯದ ‘ಜೀಬ್ರಾ’ ಮತ್ತು ‘ಪುಷ್ಪ 2’ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿವೆ. ಇದರ ಜೊತೆಗೆ ‘ನಾಡಪ್ರಭು ಕೆಂಪೇಗೌಡ’ ಮತ್ತು ‘ಹಲಗಲಿ’ ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಇದೆ. ಇವೆಲ್ಲದರ ಜೊತೆಗೆ ಅವರು ಇನ್ನೊಂದು ಚಿತ್ರವನ್ನು ಸಹ ಒಪ್ಪಿಕೊಂಡಿದ್ದಾರೆ.

ಧನಂಜಯ್‍ ಹೊಸ ಚಿತ್ರದ ಹೆಸರು ‘ಜಿಂಗೋ’. ಈ ಚಿತ್ರವನ್ನು ಶಶಾಂಕ್‍ ಸೋಗಾಲ್‍ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ, ಪೂರ್ಣಚಂದ್ರ ತೇಜಸ್ವಿ ವಿರಚಿತ ‘ಡೇರ್ ಡೆವಿಲ್‍ ಮುಸ್ತಾಫ’ ಚಿತ್ರವನ್ನು ನಿರ್ದೇಶಿಸಿದ್ದ ಶಶಾಂಕ್‍ ಅವರಿಗೆ ಇದು ಎರಡನೆಯ ಚಿತ್ರ. ‘ಡೇರ್ ಡೆವಿಲ್‍ ಮುಸ್ತಾಫ’ ಚಿತ್ರಕ್ಕೆ ಧನಂಜಯ್‍ ಬೆನ್ನೆಲುಬಾಗಿ ನಿಂತಿದ್ದರು. ಆ ಚಿತ್ರದ ಬಿಡುಗಡೆಗೆ ದೊಡ್ಡ ರೀತಿಯಲ್ಲಿ ಸಹಾಯ ಮಾಡಿದ್ದರು. ಈಗ ಅದೇ ಶಶಾಂಕ್‍ ನಿರ್ದೇಶನದ ಚಿತ್ರದಲ್ಲಿ ಧನಂಜಯ್‍ ನಟಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಧನಂಜಯ್‍ ಆ್ಯಂಟಿ-ಹೀರೋ ಆಗಿ ನಟಿಸುತ್ತಿದ್ದಾರೆ. ಬಹಳ ದಿನಗಳ ನಂತರ ಅವರು ನೆಗೆಟಿವ್‍ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ಮರ್ಡರ್‍ ಮಿಸ್ಟ್ರಿ ಚಿತ್ರ ಎಂದು ಶಶಾಂಕ್‍ ಹೇಳಿದ್ದು, ಒಂದು ಕಾಲ್ಪನಿಕ ಹಳ್ಳಿಯ ಮುಖಂಡ ಜಿಂಗೋ ಆಗಿ ಧನಂಜಯ್‍ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಈ ಹಿಂದೆ ಕಲರ್ಸ ಕನ್ನಡ ವಾಹಿನಿಯಲ್ಲಿ ಬರಹಗಾರರಾಗಿ ಕೆಲಸ ಮಾಡುತ್ತಿದ್ದ ಹ್ಯಾರಿಸ್ ಅಹ್ಮದ್‍ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದಾರೆ. ಒಂದು ಹಳ್ಳಿಯಲ್ಲಿ ಕೊಲೆಯಾದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಚಿತ್ರದ ಬರವಣಿಗೆ ಕೆಲಸ ಮುಕ್ತಾಯದ ಹಂತಕ್ಕೆ ಬಂದಿದ್ದು, ತಾರಾಗಣದ ಆಯ್ಕೆ ನಡೆಯುತ್ತಿದೆ.

‘ಜಿಂಗೋ’ ಚಿತ್ರವನ್ನು ಧನಂಜಯ್‍ ಮತ್ತು ನರೇಂದ್ರ ರೆಡ್ಡಿ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ರಾಹುಲ್‍ ರಾಯ್‍ ಛಾಯಾಗ್ರಹಣ ಮತ್ತು ನವನೀತ್‍ ಶ್ಯಾಮ್‍ ಸಂಗೀತವಿದೆ.

ಅಂದಹಾಗೆ, ಧನಂಜಯ್‍ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಡಾಲಿ ಪಿಕ್ಚರ್ಸ್ ಯೂಟ್ಯೂಬ್‍ ಚಾನಲ್‍ನಲ್ಲಿ ಚಿತ್ರದ ಮೊದಲ ಟೀಸರ್‍ ಬಿಡುಗಡೆ ಮಾಡಲಾಗಿದೆ.

ಭೂಮಿಕಾ

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago