Mysore
14
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಡ್ರಗ್ಸ್‌ ಕೇಸ್:‌ ನಟಿ ರಾಗಿಣಿಗೆ ಬಿಗ್‌ ರಿಲೀಫ್‌ ಕೊಟ್ಟ ಹೈಕೋರ್ಟ್‌

ಬೆಂಗಳೂರು: ಡ್ರಗ್ಸ್‌ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ನಟಿ ರಾಗಿಣಿ ದ್ವಿವೇದಿ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಪ್ರಕರಣ ಖುಲಾಸೆ ಮಾಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಯಾವುದೇ ಸಾಕ್ಷ್ಯಾಧಾರ ಒದಗಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾಗಿದೆ ಎಂಬ ಕಾರಣ ನೀಡಿದ ಹೈಕೋರ್ಟ್‌ ಎ2 ರಾಗಿಣಿ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು ಕಳೆದ 2020ರಲ್ಲಿ ಬಂಧಿಸಲಾಗಿತ್ತು. ಹಲವು ದಿನ ಜೈಲುವಾಸವನ್ನು ಅನುಭವಿಸಿದ್ದರು. ಡ್ರಗ್‌ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್‌ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಈ ಬಗ್ಗೆ ಟ್ವೀಟ್‌ ಮಾಡಿರುವ ನಟಿ ರಾಗಿಣಿ ದ್ವಿವೇದಿ ಅವರು, ಹೊಸ ಅಧ್ಯಾಯ ಆರಂಭವಾಗಿದೆ. ಸತ್ಯಮೇವ ಜಯತೆ. ಮೌನ ಮುರಿಯುವ ಸಮಯ ಇದಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!