ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ ಸಿಕ್ಕಿದೆ.
ನಟಿ ರಾಗಿಣಿ ದ್ವಿವೇದಿ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಪ್ರಕರಣ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಯಾವುದೇ ಸಾಕ್ಷ್ಯಾಧಾರ ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂಬ ಕಾರಣ ನೀಡಿದ ಹೈಕೋರ್ಟ್ ಎ2 ರಾಗಿಣಿ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು ಕಳೆದ 2020ರಲ್ಲಿ ಬಂಧಿಸಲಾಗಿತ್ತು. ಹಲವು ದಿನ ಜೈಲುವಾಸವನ್ನು ಅನುಭವಿಸಿದ್ದರು. ಡ್ರಗ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಾಗಿಣಿ ದ್ವಿವೇದಿ ಅವರು, ಹೊಸ ಅಧ್ಯಾಯ ಆರಂಭವಾಗಿದೆ. ಸತ್ಯಮೇವ ಜಯತೆ. ಮೌನ ಮುರಿಯುವ ಸಮಯ ಇದಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್‌ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…