ಬೆಂಗಳೂರು: ದುನಿಯಾ ವಿಜಯ್ ನಟನೆಯ ʼಮಾರುತʼ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದ್ದು, ಇದೀಗ ಚಿತ್ರತಂಡ ಡಬ್ಬಿಂಗ್ ಕೂಡ ಮುಗಿಸಿದೆ.
ಎಸ್. ನಾರಾಯಣ್ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಮುಖ್ಯಭೂಮಿಕೆಯಲ್ಲಿದ್ದು, ವಿಜಯ್‌ಗೆ ನಾಯಕಿಯಾಗಿ ಬೃಂದಾ ಆಚಾರ್ಯ ಕಾಣಿಸಿಕೊಳ್ಳುತ್ತಿದ್ದಾರೆ.
ʼಮಾರುತʼ ಚಿತ್ರವನ್ನು ಈಶಾ ಪ್ರೊಡಕ್ಸನ್ ಲಾಂಛನದಲ್ಲಿ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣ ಮಾಡಿದ್ದಾರೆ.
ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ ತಾರಾಬಳಗದಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ರವಿಂಚದ್ರನ್ ನಟಿಸಿದ್ದಾರೆ.





