duniya vijay and puri jagannadh combination telugu film
ಇತ್ತೀಚೆಗಷ್ಟೇ, ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್ 2’ ಚಿತ್ರದಲ್ಲಿ ಕನ್ನಡದ ‘ದುನಿಯಾ’ ವಿಜಯ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈಗ ಅವರು ಪುನಃ ತೆಲುಗಿನ ಚಿತ್ರವೊಂದರಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ.
ತಮಿಳಿನ ಜನಪ್ರಿಯ ನಟ ವಿಜಯ್ ಸೇತುಪತಿ ಅಭಿನಯದಲ್ಲಿ ಪುರಿ ಜಗನ್ನಾಥ್ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದ ಸಂದರ್ಭದಲ್ಲಿ ಕೇಳಿ ಬಂದಿತ್ತು. ಈಗ ಆ ಚಿತ್ರದಲ್ಲಿ ‘ದುನಿಯಾ’ ವಿಜಯ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇತ್ತೀಚೆಗೆ ನಿರ್ದೇಶಕ ಪುರಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್, ಇಬ್ಬರೂ ವಿಜಯ್ ಅವರನ್ನು ಭೇಟಿ ಮಾಡಿ ಚಿತ್ರದ ಕಥೆ ಹೇಳಿ, ಅವರಿಂದ ಒಪ್ಪಿಗೆ ಪಡೆದು ಬಂದಿದ್ದಾರೆ. ಈ ಚಿತ್ರವನ್ನು ಪುರಿ ಕನೆಕ್ಟ್ಸ್ ಸಂಸ್ಥೆಯಡಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ಜೊತೆಯಾಗಿ ನಿರ್ಮಿಸಿದರೆ, ಪುರಿ ಜಗನ್ನಾಥ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್ ನಟಿ ಟಬು ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದು ವಿಶೇಷ.
‘ದುನಿಯಾ’ ವಿಜಯ್‍ಗೆ ತೆಲುಗು ಚಿತ್ರರಂಗ ಹೊಸದೇನಲ್ಲ. ಇದಕ್ಕೂ ಮೊದಲು ನಂದಮೂರಿ ಬಾಲಕೃಷ್ಣ ಅಭಿನಯದ ‘ವೀರ ಸಿಂಹ ರೆಡ್ಡಿ’ ಎಂಬ ಚಿತ್ರದಲ್ಲಿ ನಟಿಸುವ ಮೂಲಕ ತೆಲುಗು ಚಿತ್ರರಂಗಕ್ಕೆ ಹೋಗಿದ್ದರು ‘ದುನಿಯಾ’ ವಿಜಯ್. ಈಗ ಪುರಿ ಜಗನ್ನಾಥ್ ನಿರ್ದೇಶನದ ಚಿತ್ರದಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಈ ಹೆಸರಿಡದ ಚಿತ್ರವು ಜೂನ್‍ನಿಂದ ಪ್ರಾರಂಭವಾಗುವ ನಿರೀಕ್ಷೆ ಇದೆ.
ವಿಜಯ್ ಸದ್ಯ ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲಿ ನಟಿಸುತ್ತಿದ್ದು, ಇದರ ಜೊತೆಗೆ ‘ಸಿಟಿ ಲೈಟ್ಸ್’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ವಿನಯ್ ರಾಜಕುಮಾರ್ ಮತ್ತು ವಿಜಯ್ ಮಗಳು ಮೊನೀಷಾ ನಾಯಕ-ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ, ಎಸ್. ನಾರಾಯಣ್ ನಿರ್ದೇಶನದ ‘ಮಾರುತ’ ಚಿತ್ರದಲ್ಲೂ ವಿಜಯ್ ನಟಿಸಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…