‘ದುನಿಯಾ’ ವಿಜಯ್ ಅಭಿನಯದ 29ನೇ ಚಿತ್ರಕ್ಕೆ ಚಿತ್ರೀಕರಣ ಕೆಲವು ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದು, ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಮೂರನೇ ಹಂತದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದ್ದು, ಚಿತ್ರಕ್ಕೆ ‘ರಾಚಯ್ಯ’ ಎಂದು ಹೆಸರಿಡಲಾಗಿದೆ.
ಈ ಹಿಂದೆ ‘ರಾಜಹಂಸ’, ‘ಜಂಟಲ್‍ಮ್ಯಾನ್’ ಮತ್ತು ‘ಗುರು ಶಿಷ್ಯರು’ ಚಿತ್ರಗಳನ್ನು ನಿರ್ದೇಶಿಸಿದ್ದ ಮತ್ತು ದರ್ಶನ್ ಅಭಿನಯದ ‘ಕಾಟೇರ’ ಚಿತ್ರಕ್ಕೆ ಕಥೆ-ಚಿತ್ರಕಥೆ ರಚಿಸಿದ್ದ ಜಡೇಶ್ ಹಂಪಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಒಂದು ದಶಕದ ಹಿಂದೆ ದರ್ಶನ್ ಅಭಿನಯದ ‘ಸಾರಥಿ’ ಚಿತ್ರವನ್ನು ನಿರ್ಮಿಸಿದ್ದ ಕೆ.ವಿ. ಸತ್ಯಪ್ರಕಾಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮಾಸ್ತಿ ಮಂಜು ಸಂಭಾಷಣೆ ಈ ಚಿತ್ರಕ್ಕಿದೆ.
ಈ ಚಿತ್ರಕ್ಕೆ ಕೆ. ಶಿವರಾಮ ಕಾರಂತರ ‘ಚೋಮನ ದುಡಿ’ಯ ಚೋಮನ ಪಾತ್ರ ಸ್ಪೂರ್ತಿ ಎಂದು ನಿರ್ದೇಶಕ ಜಡೇಶ್ ಮುಹೂರ್ತದ ಸಂದರ್ಭದಲ್ಲಿ ಹೇಳಿಕೊಂಡಿದ್ದರು. ಇದು ಪ್ರತಿ ಹಳ್ಳಿಯಲ್ಲೂ ನಡೆಯುವ ಕಥೆ ಎನ್ನುವ ಜಡೇಶ್, ‘ಈ ಕಥೆಯನ್ನು ಕೋಲಾರದ ಹಿನ್ನೆಲೆಯಲ್ಲಿ ಹೇಳುವುದಕ್ಕೆ ಹೊರಟಿದ್ದೇವೆ. ಈ ಹಿಂದೆ ವಿಜಯ್ ಅವರು ‘ಜಂಗ್ಲಿ’ ಚಿತ್ರದಲ್ಲಿ ಕೋಲಾರ ಸೊಗಡನ್ನು ತಮ್ಮ ಸಂಭಾಷಣೆಗಳ ಮೂಲಕ ಬಹಳ ಚೆನ್ನಾಗಿ ಹಿಡಿದಿಟ್ಟಿದ್ದರು. ಹಾಗಾಗಿ, ಕೋಲಾರದ ಹಿನ್ನೆಲೆಯಲ್ಲಿ ಕಥೆ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಈ ಚಿತ್ರಕ್ಕೆ ಕೆ. ಶಿವರಾಮ ಕಾರಂತರ ‘ಚೋಮನ ದುಡಿ’ಯ ಚೋಮನ ಪಾತ್ರ ಸ್ಪೂರ್ತಿ. ಹಾಗಂತ ಎರಡೂ ಪಾತ್ರಗಳಿಗೆ ಯಾವುದೇ ಸಂಬಂಧ ಇಲ್ಲ’ ಎಂದು ಹೇಳಿದ್ದರು.
ಈ ಚಿತ್ರದಲ್ಲಿ ವಿಜಯ್, ತಮ್ಮ ವಯಸ್ಸಿನ ಪಾತ್ರವನ್ನೇ ಮಾಡುತ್ತಿದ್ದಾರಂತೆ. ‘ಈ ಚಿತ್ರದಲ್ಲಿ ಅವರ ಪಾತ್ರವೇ ಜೀವಾಳ. 90ರ ಕಾಲಘಟ್ಟದಲ್ಲಿ ನಡೆಯುವ ಕಥೆ ಇದು. ನೈಜ ಘಟನೆಗಳನ್ನಾಧರಿಸಿ ಈ ಚಿತ್ರ ಮಾಡುತ್ತಿದ್ದೇನೆ. ನಾನು ನೋಡಿದ, ಕೇಳಿದ ಮತ್ತು ಓದಿದ ಘಟನೆಗಳನ್ನಾಧರಿಸಿ ಈ ಚಿತ್ರ ಮಾಡುತ್ತಿದ್ದೇನೆ’ ಎಂದು ಜಡೇಶ್ ಹೇಳಿದ್ದರು.
‘ರಾಚಯ್ಯ’ ಮೂಲಕ ವಿಜಯ್ ಮಗಳು ಮೋನಿಕಾ, ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಚಿತ್ರದ ಮೂಲಕ ಅವರು ತಮ್ಮ ಹೆಸರನ್ನು ರಿತನ್ಯಾ ಎಂದು ಬದಲಾಯಿಸಿಕೊಂಡಿದ್ದಾರೆ. ಮಿಕ್ಕಂತೆ ‘ಡೇರ್ ಡೆವಿಲ್ ಮುಸ್ತಾಫ’ ಖ್ಯಾತಿಯ ಶಿಶಿರ, ರಚಿತಾ ರಾಮ್, ರಾಜ್ ಬಿ ಶೆಟ್ಟಿ, ಉಮಾಶ್ರೀ ಮುಂತಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
‘ರಾಚಯ್ಯ’ ಚಿತ್ರದ ಮೊದಲ ನೋಟ ನವೆಂಬರ್ ಒಂದರಂದು ಬಿಡುಗಡೆ ಆಗಲಿದೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…